ಸೈಬರ್ ಅಪರಾಧಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿವೆ: ಗೃಹ ಸಚಿವ ಪರಮೇಶ್ವರ್

1 min read

 

ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸಲು ಪೊಲೀಸ್ ಇಲಾಖೆ ಶ್ರಮಿಸುತ್ತಿದೆ: ಡಾ: ಜಿ.ಪರಮೇಶ್ವರ್

Tumkurnews
ತುಮಕೂರು: ಅಪರಾಧಗಳು ನಡೆಯದಂತೆ ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸಲು ಪೊಲೀಸ್ ಇಲಾಖೆಯು ದಿನದ 24 ಗಂಟೆಯೂ ಜನರ ರಕ್ಷಣೆಗಾಗಿ ಶ್ರಮಿಸುತ್ತಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು.
ನಗರದ ಚಿಲುಮೆ ಸಮುದಾಯ ಭವನದಲ್ಲಿ ನಡೆದ ಜಯನಗರ ಪೊಲೀಸ್ ಠಾಣೆಯ ನೂತನ ಕಟ್ಟಡ ಹಾಗೂ ಪೊಲೀಸ್ ವಸತಿ ಗೃಹ ಸಮುಚ್ಛಯದ ಶಿಲಾನ್ಯಾಸ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

2026ರ ವೇಳೆಗೆ ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಸಮರ್ಪಣೆ: ಕೇಂದ್ರ ಸಚಿವ ವಿ.ಸೋಮಣ್ಣ
ಪೊಲೀಸರ ಸೇವೆ ಶ್ರಮದ ಸೇವೆ. ಶ್ರಮದ ಸೇವೆ ಸಲ್ಲಿಸುವ ಪೊಲೀಸರು ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಲು ಅನುವಾಗುವ ಉದ್ದೇಶದಿಂದ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬದವರಿಗಾಗಿ ನಗರದ ಚಿಲುಮೆ ಸಮುದಾಯ ಭವನದ ಹಿಂಭಾಗ 22 ಕೋಟಿ ರೂ. ವೆಚ್ಚದಲ್ಲಿ 62 ವಸತಿ ಗೃಹ ಸಮುಚ್ಛಯವನ್ನು ನಿರ್ಮಾಣ ಹಾಗೂ ಜಯನಗರ ಪೊಲೀಸ್ ಠಾಣೆ ಹೊಸ ಕಟ್ಟಡ ನಿರ್ಮಾಣಕ್ಕೂ ಶಂಕು ಸ್ಥಾಪನೆ ನೆರವೇರಿಸಲಾಯಿತು ಎಂದರು.

ತುಮಕೂರು: ಜಿಲ್ಲಾಧಿಕಾರಿಗಳಿಂದ ವಿವಿಧ ಗ್ರಾಮಗಳಿಗೆ ಭೇಟಿ: ಕಂದಾಯ ಪ್ರಗತಿ ಪರಿಶೀಲನೆ
ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ದೇಶದಲ್ಲೇ ಮುಂಚೂಣಿಯಲ್ಲಿರುವುದು ನಾವೆಲ್ಲರೂ ಹೆಮ್ಮೆಪಡುವ ಸಂಗತಿಯಾಗಿದೆ ಎಂದರು. ಆಧುನಿಕ ಜಗತ್ತಿನಲ್ಲಿ ಜನರು ಹೆಚ್ಚು ಪ್ರಜ್ಞಾವಂತರಾಗಿದ್ದರೂ ಸಹ ಕೊಲೆ, ಅಪರಾಧಗಳು ನಡೆಯುತ್ತಲೇ ಇವೆ. ಹಣಕಾಸು ವ್ಯವಹಾರಗಳು ಡಿಜಿಟಲೀಕರಣದ ಮೂಲಕ ನಡೆಯುತ್ತಿದ್ದರೂ ರಾಜ್ಯದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿವೆ. ಒಂದು ವರ್ಷಕ್ಕೆ ಸುಮಾರು 25 ಸಾವಿರಕ್ಕೂ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿವೆ. ಸೈಬರ್ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದಲ್ಲಿ ಒಟ್ಟು 43 ಸೈಬರ್ ಪೊಲೀಸ್ ಸ್ಟೇಷನ್‍ಗಳು ಕಾರ್ಯ ನಿರ್ವಹಿಸುತ್ತಿವೆ ಎಂದರು.
ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಪರಿಣಾಮಕಾರಿಯಾಗಿ ನಾಗರಿಕ ಸೇವೆ ಸಲ್ಲಿಸಲು ರಾಜ್ಯದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಜೀಪುಗಳನ್ನು ನೀಡಲಾಗಿದ್ದು, ಪ್ರತಿ ಜಿಲ್ಲೆಗೆ 7 ರಿಂದ 8 ಜೀಪುಗಳನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಪೊಲೀಸರು ಪಣತೊಡಬೇಕು. ಡ್ರಗ್ಸ್’ನಿಂದ ಯುವಕರು ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಡ್ರಗ್ಸ್ ಮಾಫಿಯಾ ಅಪರಾಧಿಗಳನ್ನು ಮುಲಾಜಿಲ್ಲದೆ ಹಿಡಿದು ಒಳಗೆ ಹಾಕಬೇಕು. ಇತ್ತೀಚೆಗಷ್ಟೇ ದಾಬಸ್‍ಪೇಟೆಯಲ್ಲಿ 3 ಕೋಟಿ ರೂ. ಮೌಲ್ಯದ ಡ್ರಗ್ಸ್ ಸುಟ್ಟು ಹಾಕಲಾಗಿದೆ ಎಂದರು.

ಗೃಹಲಕ್ಷ್ಮಿ ಯೋಜನೆ: ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ
ನಗರದಲ್ಲಿ ವಾಹನ ಸವಾರರು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದರೆ ತಪ್ಪದೇ ದಂಡ ಕಟ್ಟಬೇಕಾಗುತ್ತದೆ. ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ನಿರ್ವಹಣೆ ಮಾಡುತ್ತಿರುವ ಕಮ್ಯಾಂಡಿಂಗ್ ಸೆಂಟರ್ ಸಂಚಾರಿ ನಿಯಮ ಉಲ್ಲಂಘಿಸುವ ವಾಹನ ಸವಾರರ ಮೇಲೆ ಕಣ್ಣಿಡಲಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕೆಂದು ತಿಳಿಸಿದರು.
ಇತ್ತೀಚೆಗೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ 5000 ವಸತಿ ಗೃಹಗಳ ನಿರ್ಮಾಣಕ್ಕೆ 1650 ಕೋಟಿ ರೂ.ಗಳ ಅನುದಾನ ಒದಗಿಸಲು ಮನವಿ ಮಾಡಿದ್ದು, ಮನವಿಗೆ ಸಕಾರಾತ್ಮಕವಾಗಿ ಸ್ಪಂದನೆ ದೊರೆತಿದೆ. ಕೇಂದ್ರದಿಂದ ಶೀಘ್ರದಲ್ಲೇ ಅನುದಾನ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ನಗರ ಶಾಸಕ ಜ್ಯೋತಿ ಗಣೇಶ್ ಅವರು, ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿರುವುದರಿಂದ ದಕ್ಷ ಆಡಳಿತ ನೀಡುವುದರ ಜೊತೆಗೆ ತಮ್ಮ ಕುಟುಂಬಕ್ಕೂ ಸಮಯ ನೀಡಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವಸತಿ ಗೃಹ ಸಮುಚ್ಛಯ ನಿರ್ಮಿಸಲು ಮುಂದಾಗಿರುವುದು ಶ್ಲಾಘನೀಯ. ಪೊಲೀಸ್ ಇಲಾಖೆಗೆ ಹೆಚ್ಚು ಸೌಲಭ್ಯಗಳನ್ನು ನೀಡಿದಷ್ಟು ಹೆಚ್ಚು ದಕ್ಷವಾಗಿ ಕಾರ್ಯ ಮಾಡಲು ಸಹಾಯಕವಾಗುತ್ತದೆ ಎಂದು ತಿಳಿಸಿದರು.

ತುಮಕೂರಿನಲ್ಲಿ ಯುವ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆ: ಸಚಿವ ಪ್ರಿಯಾಂಕ್ ಖರ್ಗೆ
ಕರ್ನಾಟಕ ರಾಜ್ಯ ಡಿಜಿಪಿ ಮತ್ತು ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ಕೆ. ರಾಮಚಂದ್ರರಾವ್ ಪ್ರಾಸ್ತಾವಿಕವಾಗಿ ಮಾತನಾಡಿ, ಪೊಲೀಸ್ ಸಿಬ್ಬಂದಿಗಳು ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಲು ಹಾಗೂ ಜನ ಸಾಮಾನ್ಯರ ಸಂಪರ್ಕಕ್ಕೆ ಸಿಗುವಂತೆ ಮಾಡಲು ವಸತಿ ಗೃಹಗಳನ್ನು ಠಾಣೆಯ ಹತ್ತಿರದಲ್ಲಿಯೇ ನಿರ್ಮಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸುಸಜ್ಜಿತ 300 ವಸತಿ ಗೃಹಗಳನ್ನು ನಿರ್ಮಿಸಲು ಸಚಿವರು ಇಂದು ಶಿಲಾನ್ಯಾಸ ನೆರವೇರಿಸಿದ್ದು, 2025ರ ಜುಲೈ ಮಾಹೆಯೊಳಗಾಗಿ ವಸತಿ ಸಮುಚ್ಛಯ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಹಾ ನಿರ್ದೇಶಕ ಮತ್ತು ಪೊಲೀಸ್ ಮಹಾ ನಿರೀಕ್ಷಕ ಅಲೋಕ್ ಮೋಹನ್, ಬೆಂಗಳೂರು ಕೇಂದ್ರವಲಯ ಪೊಲೀಸ್ ಮಹಾ ನಿರೀಕ್ಷಕ ಲಾಭು ರಾಮ್, ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮದ ಮುಖ್ಯ ಇಂಜಿನಿಯರ್ ಬಿ.ಹೆಚ್.ಮಂಜುನಾಥ್, ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ಕೆ.ವಿ., ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿ. ಮರಿಯಪ್ಪ ಹಾಗೂ ಬಿ.ಎಸ್. ಅಬ್ದುಲ್ ಖಾದರ್, ನಿವೃತ್ತ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಜಯನಗರ ಪೊಲೀಸ್ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.

About The Author

You May Also Like

More From Author

+ There are no comments

Add yours