ಕೊರಟಗೆರೆ: ತೆಂಗು ಬೆಳೆಗೆ ಪರಿಕರ ವಿತರಣೆಗಾಗಿ ಅರ್ಜಿ ಆಹ್ವಾನ
Tumkurnews
ತುಮಕೂರು: 2024-25ನೇ ಸಾಲಿನಲ್ಲಿ ಕೊರಟಗೆರೆ ತಾಲ್ಲೂಕು ತೋಟಗಾರಿಕೆ ಇಲಾಖೆಯಲ್ಲಿ 2023-24ನೇ ಸಾಲಿನ ತೆಂಗು ಅಭಿವೃದ್ಧಿ ಮಂಡಳಿಯಿಂದ ತೆಂಗು ಬೆಳೆಯಲ್ಲಿ ಸಂಯೋಜಿತ ಬೇಸಾಯ ಯೋಜನೆಯಲ್ಲಿ ತೆಂಗಿನ ತೋಟ ಬೆಳೆದಿರುವ ಪರಿಶಿಷ್ಟ ಜಾತಿ ರೈತರಿಗೆ 110 ಹೆಕ್ಟೇರ್ ಪ್ರದೇಶಕ್ಕೆ ಪರಿಕರ ವಿತರಣೆ ಮಾಡಲು ಭೌತಿಕ ಗುರಿ ಇದ್ದು, ಯೋಜನೆಯ ಪ್ರಯೋಜನ ಪಡೆಯಲು ಪರಿಶಿಷ್ಟ ಜಾತಿ (ಎಸ್.ಸಿ) ರೈತರು ಕೂಡಲೇ ಕೊರಟಗೆರೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.), ಕಚೇರಿಗೆ ಅರ್ಜಿ ಸಲ್ಲಿಸಲು ಜುಲೈ 15ರಂದು ಕೊನೆಯ ದಿನವಾಗಿದೆ ಎಂದು ಕೊರಟಗೆರೆ ಕೊರಟಗೆರೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ರಾಮಾಂಜಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours