ಬೆಸ್ಕಾಂ: ಆರ್.ಆರ್.ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ
Tumkurnews
ತುಮಕೂರು: ತುಮಕೂರು ಹಾಗೂ ಗುಬ್ಬಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ ಪಂಪ್‍ಸೆಟ್‍ನ ವಿದ್ಯುತ್ ಆರ್.ಆರ್ ಸಂಖ್ಯೆಗೆ ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಬೇಕೆಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ತಿಳಿಸಿದ್ದಾರೆ.
ಹಾಲಿ ಇರುವ ಕೃಷಿ ಪಂಪ್‍ಸೆಟ್‍ನ ವಾರಸುದಾರರು ಮರಣ ಹೊಂದಿದ್ದಲ್ಲಿ ಪ್ರಸ್ತುತ ಪಹಣಿಯಲ್ಲಿರುವವರ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಹಿಂದಿನ ವಾರಸುದಾರರ ಮರಣ ಪ್ರಮಾಣ ಪತ್ರ, ಛಾಪಾಕಾಗದ ಹಾಗೂ ಪಹಣಿಯಲ್ಲಿ ಜಂಟಿ ಖಾತೆಯಾಗಿದ್ದರೆ ಉಳಿದವರ ಒಪ್ಪಿಗೆ ಪತ್ರ, ಕ್ರಯ ಪತ್ರದ ದಾಖಲೆಯನ್ನು ಸಮೀಪದ ಬೆಸ್ಕಾಂ ಶಾಖಾ ಕಚೇರಿ ಅಥವಾ ಸಂಬಂಧಿಸಿದ ಪವರ್ ಮ್ಯಾನ್ ಅಥವಾ ಮೀಟರ್ ರೀಡರ್‌ಗಳಿಗೆ ಸಲ್ಲಿಸಿ ಹಾಲಿ ಆರ್.ಆರ್.ಸಂಖ್ಯೆಯಲ್ಲಿರುವ ಹೆಸರನ್ನು ಬದಲಾವಣೆ ಮಾಡಿಸಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.
+ There are no comments
Add yours