ತುಮಕೂರು: 200ರ ಗಡಿ ದಾಟಿದ ಡೆಂಗ್ಯೂ ಪ್ರಕರಣ: ಸಹಾಯವಾಣಿ ಆರಂಭ

1 min read

 

ಡೆಂಗ್ಯೂ: ಮಾಹಿತಿಗಾಗಿ ಸಹಾಯವಾಣಿ ಕಾರ್ಯಾರಂಭ

Tumkurnews
ತುಮಕೂರು: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ, ಮುನ್ನೆಚ್ಚರಿಕೆ ಕ್ರಮ ಸೇರಿದಂತೆ ಡೆಂಗ್ಯೂ ರೋಗಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಸಂಖ್ಯೆ 0816-2950120 ಯನ್ನು ಕಾರ್ಯಾರಂಭಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಡಿ.ಎನ್. ಮಂಜುನಾಥ್ ತಿಳಿಸಿದ್ದಾರೆ.
ಸಹಾಯವಾಣಿಯು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಕಾರ್ಯ ನಿರ್ವಹಿಸಲಿದ್ದು, ಸಾರ್ವಜನಿಕರು ನಿಗದಿತ ಅವಧಿಯಲ್ಲಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಡೆಂಗ್ಯೂ ರೋಗಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಬಹುದಾಗಿದೆ.

ತುಮಕೂರು: ಡೆಂಗ್ಯೂ ನಿಯಂತ್ರಣಕ್ಕೆ ಪಾಲಿಕೆಯೊಂದಿಗೆ ಕೈಜೋಡಿಸಿ: ಆಯುಕ್ತೆ ಅಶ್ವಿಜ ಮನವಿ
ಜಿಲ್ಲೆಯಲ್ಲಿ 225 ಡೆಂಗ್ಯೂ ಪ್ರಕರಣ ವರದಿ:
ಜಿಲ್ಲೆಯಲ್ಲಿ 2024ರ ಜನವರಿ ಮಾಹೆಯಿಂದ ಜುಲೈ 11ರವರೆಗೆ ಒಟ್ಟು 225 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿರುವ ಬಗ್ಗೆ ವರದಿಯಾಗಿದ್ದು, ಜುಲೈ 11ರಂದು ಡೆಂಗ್ಯೂ ಜ್ವರಕ್ಕೆ ಸಂಬಂಧಿಸಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ 55 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 99 ಸೇರಿ ಒಟ್ಟು 154 ರಕ್ತ ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದೆ. ಒಳರೋಗಿಗಳಾಗಿ ಸರ್ಕಾರಿ ಆಸ್ಪತ್ರೆಯಲ್ಲಿ 7 ಮಂದಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 5 ಮಂದಿ ಸೇರಿ ಒಟ್ಟು 12 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡೆಂಗ್ಯೂ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾವು ಸಂಭವಿಸಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ತುಮಕೂರು: ಜು.16ರಂದು 5, 15, 16ನೇ ವಾರ್ಡ್ ಜನಸ್ಪಂದನ

About The Author

You May Also Like

More From Author

+ There are no comments

Add yours