ತುಮಕೂರು: ಡೆಂಗ್ಯೂ ನಿಯಂತ್ರಣಕ್ಕೆ ಪಾಲಿಕೆಯೊಂದಿಗೆ ಕೈಜೋಡಿಸಿ: ಆಯುಕ್ತೆ ಅಶ್ವಿಜ ಮನವಿ

1 min read

 

ಡೆಂಗ್ಯೂ ನಿಯಂತ್ರಣ: ಪಾಲಿಕೆಯೊಂದಿಗೆ ಕೈಜೋಡಿಸಲು ನಾಗರಿಕರಲ್ಲಿ ಮನವಿ

Tumkurnews
ತುಮಕೂರು: ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ, ಚಿಕುಂಗುನ್ಯಾ, ಮಲೇರಿಯಾ ಮತ್ತಿತರ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವಲ್ಲಿ ನಾಗರಿಕರು ಪಾಲಿಕೆಯೊಂದಿಗೆ ಕೈಜೋಡಿಸಬೇಕೆಂದು ಆಯುಕ್ತೆ ಬಿ.ವಿ.ಅಶ್ವಿಜ ಮನವಿ ಮಾಡಿದ್ದಾರೆ.
ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಪಾಲಿಕೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪ್ರತಿ ಶುಕ್ರವಾರ ನಗರ ವ್ಯಾಪ್ತಿಯಲ್ಲಿ ಶುಷ್ಕದಿನ(ಡ್ರೈ-ಡೇ) ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಅಭಿಯಾನದಲ್ಲಿ ಸಾರ್ವಜನಿಕರು ಪಾಲಿಕೆಯೊಂದಿಗೆ ಸಹಕರಿಸಬೇಕು.
ಸಾರ್ವಜನಿಕರು, ವಾಣಿಜ್ಯ ಉದ್ದಿಮೆದಾರರು, ಶಾಲಾ-ಕಾಲೇಜಿನ ಆಡಳಿತ ಮಂಡಳಿಯವರು ತಾವು ವಾಸಿಸುತ್ತಿರುವ ಪ್ರದೇಶದ ಸುತ್ತಮುತ್ತಲಿನ ಪ್ರದೇಶ ಹಾಗೂ ಒಳಾಂಗಣ, ಹೊರಾಂಗಣದಲ್ಲಿ ನೀರನ್ನು ಸಂಗ್ರಹಿಸಬಹುದಾದ ಸಿಮೆಂಟ್ ತೊಟ್ಟಿ, ಬ್ಯಾರಲ್, ಡ್ರಮ್, ಬಕೆಟ್, ಏರ್ ಕೂಲರ್, ಕೊಡಗಳಲ್ಲಿ ನೀರನ್ನು ಶೇಖರಿಸಿಟ್ಟಿದ್ದಲ್ಲಿ ವಾರಕ್ಕೊಮ್ಮೆಯಾದರೂ ಅದನ್ನು ಖಾಲಿ ಮಾಡಿ ಒಣಗಿಸಿ ಮತ್ತೆ ಭರ್ತಿ ಮಾಡಿ ಸಂಪೂರ್ಣವಾಗಿ ಮುಚ್ಚಿಡಬೇಕು. ಮನೆಯ ಸುತ್ತ ಮುತ್ತಲಿನ ಅಂಗಳವನ್ನು ನಿಂತ ನೀರಿನಿಂದ ಮುಕ್ತವಾಗಿರಿಸಿಕೊಳ್ಳಬೇಕುಸಾಂಕ್ರಾಮಿಕ ರೋಗಗಳು ಸೊಳ್ಳೆಗಳಿಂದ ಹರಡಲಿದ್ದು, ನಿಂತ ನೀರಿನ ತಾಣಗಳಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ಕಾರ್ಯ ಹೆಚ್ಚು ಸಂಭವವಿರುವುದರಿಂದ ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಅಲ್ಲದೆ ಬಯಲಿನಲ್ಲಿರುವ ಒಡೆದ ಬಾಟಲಿ, ಟಿನ್, ಉಪಯೋಗಿಸಿ ಬಿಸಾಡಿದ ಟೈರ್, ತೆಂಗಿನ ಚಿಪ್ಪಿನಂತಹ ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಅವುಗಳನ್ನು ಸೂಕ್ತ ರೀತಿಯಲ್ಲಿ ಎಚ್ಚರಿಕೆಯಿಂದ ವಿಲೇವಾರಿ ಮಾಡಬೇಕು.
ಸೊಳ್ಳೆ ನಿಯಂತ್ರಣವು ಸಮುದಾಯದ ಚಟುವಟಿಕೆಯಾಗಿದ್ದು, ಈ ನಿಟ್ಟಿನಲ್ಲಿ ಸಾಂಕ್ರಾಮಿಕ ರೋಗಗಳಿಂದಾಗುವ ಅನಾಹುತವನ್ನು ತಡೆಯುವಲ್ಲಿ ನಾಗರಿಕರು ಪಾಲಿಕೆ ಹಾಗೂ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದ್ದಾರೆ.
ಪಾಲಿಕೆಯಿಂದ ಈಗಾಗಲೇ ಪ್ರತಿನಿತ್ಯ ಸಮರ್ಪಕ ಘನತ್ಯಾಜ್ಯ ವಿಲೇವಾರಿ, ಚರಂಡಿ ಸ್ವಚ್ಛತೆ, ಕೊಳಚೆ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸಿ ಕೀಟನಾಶಕಗಳ ಸಿಂಪಡಣೆ, ಕಾಲಕಾಲಕ್ಕೆ ಧೂಮೀಕರಣ ಕಾರ್ಯವನ್ನು ನಿರಂತರವಾಗಿ ಕೈಗೊಳ್ಳಲಾಗಿದೆ ಹಾಗೂ ಡೆಂಗ್ಯೂ, ಚಿಕುಂಗುನ್ಯಾನಂತಹ ಸಾಂಕ್ರಾಮಿಕ ರೋಗಗಳ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ತುಮಕೂರು: ಜು.16ರಂದು 5, 15, 16ನೇ ವಾರ್ಡ್ ಜನಸ್ಪಂದನ

About The Author

You May Also Like

More From Author

+ There are no comments

Add yours