ತುಮಕೂರು: 6ರಿಂದ 16 ವರ್ಷ ವಯಸ್ಸಿನ ಮಕ್ಕಳ ಮನೆ-ಮನೆ ಸಮೀಕ್ಷೆ

1 min read

 

6ರಿಂದ 16 ವರ್ಷ ವಯಸ್ಸಿನ ಮಕ್ಕಳ ಮನೆ-ಮನೆ ಸಮೀಕ್ಷೆ

Tumkurnews
ತುಮಕೂರು: 6 ರಿಂದ 16 ವರ್ಷ ವಯಸ್ಸಿನ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಶಾಲೆಗೆ ದಾಖಲು ಮಾಡುವ ಪ್ರಕ್ರಿಯೆಯನ್ನು ಜುಲೈ 15 ರಿಂದ 31ರವರೆಗೆ ಮನೆ-ಮನೆ ಸಮೀಕ್ಷೆ ಮೂಲಕ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಹೈಕೋರ್ಟ್ ನಿರ್ದೇಶನದ ಪ್ರಕಾರ ಹಾಗೂ ಆರ್‍ಟಿಇ ಕಾಯ್ದೆ ಅನ್ವಯ ಪ್ರತಿ ಮಗು 8 ವರ್ಷಗಳ ಶಾಲಾ ಶಿಕ್ಷಣವನ್ನು ಪಡೆಯುವುದು ಆ ಮಗುವಿನ ಮೂಲಭೂತ ಹಕ್ಕು. ಇದನ್ನು ಒದಗಿಸಲು ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಇದೇ ಜುಲೈ 15 ರಿಂದ ಜುಲೈ 31 ರವರೆಗೆ ಪಂಚಾಯತ್ ರಾಜ್ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಕೈಗೊಳ್ಳಲಾಗಿದೆ.

ತುಮಕೂರು: ಜಿಲ್ಲಾಧಿಕಾರಿಗಳಿಂದ ವಿವಿಧ ಗ್ರಾಮಗಳಿಗೆ ಭೇಟಿ: ಕಂದಾಯ ಪ್ರಗತಿ ಪರಿಶೀಲನೆ
ಸದರಿ ಅಭಿಯಾನವನ್ನು ತುಮಕೂರು ತಾಲೂಕಿನ 41 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮೀಕ್ಷೆ ಕೈಗೊಂಡು ಶಾಲೆ ಬಿಟ್ಟ ಮಕ್ಕಳ ಮಾಹಿತಿಯನ್ನು ಪಡೆದು ಮೊಬೈಲ್ ಆಪ್ ಮೂಲಕ ದಾಖಲು ಮಾಡಿಕೊಳ್ಳಲಾಗುವುದು. ಸಮೀಕ್ಷೆಯನ್ನು ನಗರ, ಗ್ರಾಮೀಣ ಪ್ರದೇಶದಲ್ಲಿ ಕಟ್ಟಡ ಕಾಮಗಾರಿ ನಡೆಯುತ್ತಿರುವ ಸ್ಥಳ, ನಗರ ಸ್ಥಳೀಯ ಸಂಸ್ಥೆಯ ಜನ ವಸತಿ ಪ್ರದೇಶಗಳಲ್ಲಿ, ಕೈಗಾರಿಕಾ ಸ್ಥಳಗಳು, ಕೃಷಿ ಕಾರ್ಮಿಕ ವಲಯಗಳು, ಕೊಳಗೇರಿ ಪ್ರದೇಶಗಳು, ಬಸ್ಸು, ರೈಲ್ವೆ ನಿಲ್ದಾಣ ಧಾರ್ಮಿಕ ಕೇಂದ್ರಗಳು, ಅನಾಥಾಶ್ರಮಗಳು, ಬಂದಿಖಾನೆ, ಆಸ್ಪತ್ರೆ, ಹೋಟೆಲ್, ಚಿತ್ರಮಂದಿರಗಳು, ಇಟ್ಟಿಗೆ ತಯಾರಿಸುವ ಸ್ಥಳ, ಬೀದಿಯಲ್ಲಿರುವ ಮಗು, ಅಲೆಮಾರಿ ಕುಟುಂಬದ ಮಗು ಹಾಗೂ ಇತರೆ ಸ್ಥಳಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ.

ತುಮಕೂರು: ಕೃಷಿ ಮಾಹಿತಿಗಾಗಿ ಸಹಾಯವಾಣಿ ಕೇಂದ್ರ: ಜಿಲ್ಲಾಧಿಕಾರಿಗಳಿಂದ ಚಾಲನೆ
ಯಾರಾದರೂ ಶಾಲೆಯಿಂದ ಹೊರಗುಳಿದ ಮಕ್ಕಳು ಕಂಡು ಬಂದಲ್ಲಿ ಅವರಿಗೆ ಶಾಲೆಗಳಿಗೆ ಮರು ದಾಖಲಾತಿಯನ್ನು ಮಾಡಿಕೊಳ್ಳಲಾಗುವುದು. ಸದರಿ ಸಮೀಕ್ಷಾ ಕಾರ್ಯಕ್ಕೆ ಸಾರ್ವಜನಿಕರಿಂದ ಸಹಕಾರವನ್ನು ನೀಡಲು ಕೋರುತ್ತಾ ಪ್ರತಿ ಮಗು ಶಿಕ್ಷಣದಿಂದ ವಂಚಿತರಾಗದಂತೆ ತಡೆಯಲು ಅರ್ಹ ವಯಸ್ಸಿನ ಮಗು ಶಾಲೆಯನ್ನು ಬಿಟ್ಟಿದ್ದಲ್ಲಿ ದೂರವಾಣಿ ಸಂಖ್ಯೆಗೆ 0816-2272358, 2955404, ಮೊ.ಸಂ.9480695360, 9480695370 ಕರೆ ಮಾಡಬಹುದು ಎಂದು ತುಮಕೂರು ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷ ಕುಮಾರ್ ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆ: ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ
ಈ ವೇಳೆ ತಾಲೂಕು ಯೋಜನಾಧಿಕಾರಿ ಲೋಕೇಶ್ ಕುಮಾರ್ ಬಿ., ಸಹಾಯ ನಿರ್ದೇಶಕ (ಗ್ರಾಮೀಣ ಉದ್ಯೋಗ) ಎಸ್. ಮಂಜುನಾಥ್ ಹಾಜರಿದ್ದರು.

About The Author

You May Also Like

More From Author

+ There are no comments

Add yours