ಸಣ್ಣ ಸಮುದಾಯಗಳಿಗೆ ಶಕ್ತಿ ತುಂಬಲು ನಿರ್ಧಾರ: ಬಿಜೆಪಿ
Tumkurnews
ತುಮಕೂರು: ಸಣ್ಣಪುಟ್ಟ ಸಮಾಜದವರನ್ನು ಪಕ್ಷದ ತೆಕ್ಕೆಗೆ ತರಲು ಅವರಲ್ಲಿ ರಾಜಕೀಯ ಶಕ್ತಿ ತುಂಬುವ ಹಾಗೂ ಕೇಂದ್ರ ಸಕಾರದ ಜನಪರ ಯೋಜನೆಗಳನ್ನು ಗ್ರಾಮಮಟ್ಟಕ್ಕೆ ಕೊಂಡೊಯ್ದು ಜನರಿಗೆ ತಲುಪಿಸುವ ಸಂಬಂಧ ಬಿಜೆಪಿ ಓಬಿಸಿ ಮೋರ್ಚಾ ಸಭೆ ಸೇರಿ ಚರ್ಚಿಸಿದೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್ ಹೇಳಿದರು.
ಗೃಹಲಕ್ಷ್ಮಿ ಯೋಜನೆ: ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ
ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಭೆಯಲ್ಲಿ ಪಕ್ಷದ ಮುಖಂಡರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಚರ್ಚೆಗಳಾಗಿವೆ ಎಂಬ ತಪ್ಪು ಮಾಹಿತಿ ಹರಡಿದೆ, ಅದು ಸುಳ್ಳು ಅಂತಹ ಯಾವುದೇ ಚರ್ಚೆಗಳಾಗಿಲ್ಲ, ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳುವ ಕುರಿತು ಚರ್ಚಿಸಲಾಯಿತು ಎಂದು ಸ್ಪಷ್ಟಪಡಿಸಿದರು.
ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳು ಸಭೆ ಸೇರಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆ. ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಓಬಿಸಿ ವರ್ಗದಿಂದ ಅಭಿನಂದನೆ ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಮಾರಂಭ ಆಯೋಜಿಸುವ ಸಂಬಂಧ ಪೂರ್ವಭಾವಿ ಸಭೆ ಇದಾಗಿತ್ತು ಎಂದರು.
ಶಿರಾ: ಜಿಲ್ಲಾಧಿಕಾರಿ ಶುಭಕಲ್ಯಾಣ್ ಅನಿರೀಕ್ಷಿತ ಭೇಟಿ: ಅಧಿಕಾರಿಗಳು ತಬ್ಬಿಬ್ಬು
ಸಣ್ಣಪುಟ್ಟ ಸಮುದಾಯಗಳಿಗೆ ಸಾಮಾಜಿಕ, ಆರ್ಥಿಕ, ರಾಜಕೀಯ ಶಕ್ತಿ ತುಂಬುವ ಬಗ್ಗೆ ಚಿಂತನೆ, ರಾಜಕೀಯ ಅವಕಾಶ ಕಲ್ಪಿಸುವ ಕುರಿತು ಮಾತುಕತೆ ನಡೆಯಿತು. ಮುಂಬರುವ ಚುನಾವಣೆಗಳಲ್ಲಿ ಹಾಗೂ ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ಅವಕಾಶ ವಂಚಿತ ಸಮುದಾಯದ ಮುಖಂಡರಿಗೆ ಪ್ರಾತಿನಿದ್ಯ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಈ ಬಗ್ಗೆ ರಾಜ್ಯ ನಾಯಕರ ಗಮನಕ್ಕೆ ತರುವ ಬಗ್ಗೆಯೂ ಚಚಿಸಲಾಯಿತು ಎಂದು ಶಿವಪ್ರಸಾದ್ ಹೇಳಿದರು.
2026ರ ವೇಳೆಗೆ ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಸಮರ್ಪಣೆ: ಕೇಂದ್ರ ಸಚಿವ ವಿ.ಸೋಮಣ್ಣ
ಎಲ್ಲಾ ಜಾತಿಗಳಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಿ ಅನುದಾನ ನೀಡಿದ್ದು ಬಿಜೆಪಿ ಸರ್ಕಾರ. ಆ ನಿಗಮಗಳ ಶೇ. 10ರಷ್ಟು ಹಣವನ್ನೂ ಕಾಂಗ್ರೆಸ್ ಸರ್ಕಾರ ಆ ವರ್ಗದ ಜನರಿಗೆ ಬಳಿಕೆ ಮಾಡಿಲ್ಲ, ಇದರ ಬಗ್ಗೆ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಕುರಿತು ಚರ್ಚೆ ಮಾಡಲಾಯಿತು ಎಂದರು.
ಜಿಲ್ಲಾ ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ಕೆ.ವೇದಮೂರ್ತಿ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ಮುಖಂಡರಾದ ಆಯರಹಳ್ಳಿ ಶಂಕರಪ್ಪ, ರುದ್ರೇಶ್, ಮಲ್ಲಿಕಾರ್ಜುನ್, ಅಣೆತೋಟ ಶ್ರೀನಿವಾಸ್, ಬನಶಂಕರಿಬಾಬು, ನಾಗಭೂಷಣ್, ಕೃಷ್ಣಮೂರ್ತಿ ಮೊದಲಾದವರು ಹಾಜರಿದ್ದರು.
ತುಮಕೂರು: ಕೃಷಿ ಮಾಹಿತಿಗಾಗಿ ಸಹಾಯವಾಣಿ ಕೇಂದ್ರ: ಜಿಲ್ಲಾಧಿಕಾರಿಗಳಿಂದ ಚಾಲನೆ
+ There are no comments
Add yours