ತುಮಕೂರು ಸೇರಿದಂತೆ ರಾಜ್ಯದ 50ಕ್ಕೂ ಅಧಿಕ ಕಡೆ ಲೋಕಾಯುಕ್ತ ದಾಳಿ

1 min read

 

ತುಮಕೂರು ಸೇರಿದಂತೆ ರಾಜ್ಯದ 50ಕ್ಕೂ ಅಧಿಕ ಕಡೆ ಲೋಕಾಯುಕ್ತ ದಾಳಿ

Tumkurnews
ಬೆಂಗಳೂರು: ನಗರ ಸೇರಿದಂತೆ ರಾಜ್ಯದ 50ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗೆ ಬೆಳಂಬೆಳಗ್ಗೆ ಶಾಕ್ ನೀಡಿದ್ದಾರೆ.
ಬೆಂಗಳೂರಿನ ಖನಿಜ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಐಎಡಿಬಿ ಅಪರ ನಿರ್ದೇಶಕ ಸಿ.ಟಿ ಮುದ್ದು ಕುಮಾರ್ ಅವರಿಗೆ ಸೇರಿದ ತುಮಕೂರು ಜಿಲ್ಲೆಯಲ್ಲಿರುವ ವಿವಿಧ ಕಡೆಗಳಲ್ಲಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತರು ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ.

ತುಮಕೂರು: ಜಿಟಿಜಿಟಿ ಮಳೆ: ವಾಯು ವಿಹಾರಕ್ಕೆ ಅಡ್ಡಿ
ಸಿ.ಟಿ ಮುದ್ದುಕುಮಾರ್ ಅವರು ಅಪರ ನಿರ್ದೇಶಕಾಗಿ ಕೆಐಎಡಿಬಿಯ ಖನಿಜ ಭವನ ಬೆಂಗಳೂರು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ.
ತುಮಕೂರು‌ ಹಾಗೂ ಬೆಂಗಳೂರಿನಲ್ಲಿ ಏಕಕಾಲದಲ್ಲಿ ಒಟ್ಟು 7 ಕಡೆಗಳಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರಿನ ನಾಗರಬಾವಿಯ ಎರಡನೇ ಹಂತದಲ್ಲಿರುವ ವಾಸದ ಮನೆ, ರೇಸ್ ಕೋರ್ಸ್ ರಸ್ತೆಯ ಖನಿಜ ಭವನದಲ್ಲಿರುವ ಕಚೇರಿ, ತುಮಕೂರು ನಗರದ ಬನಶಂಕರಿಯಲ್ಲಿರುವ ಮನೆ, ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿರುವ ಮನೆ, ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿ ರಂಗನಾಥಪುರದಲ್ಲಿರುವ ಫಾರಂಹೌಸ್, ತುಮಕೂರಿನ ಅಂತರಸನಹಳ್ಳಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಪ್ಲಾಸ್ಟಿಕ್ ಬಾಟಲ್ ತಯಾರಿಕಾ ಘಟಕ ಸೇರಿದಂತೆ ಒಟ್ಟು 7 ಕಡೆಗಳಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಕೊಬ್ಬರಿ ಬೆಳೆಗಾರರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸಚಿವ ವಿ ಸೋಮಣ್ಣ
ತುಮಕೂರು ಲೋಕಾಯುಕ್ತ ಎಸ್.ಪಿ ಲಕ್ಷ್ಮೀ ಗಣೇಶ್ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು, ಲೋಕಾಯುಕ್ತ ಡಿವೈಎಸ್ಪಿ ಬಿ.ಉಮಾಶಂಕರ್, ರಾಮಕೃಷ್ಣಯ್ಯ ನೇತೃತ್ವದಲ್ಲಿ,
ಇನ್ಸ್‌ಪೆಕ್ಟರ್’ಗಳಾದ ಶಿವರುದ್ರಪ್ಪ ಮೇಟಿ, ಮಹಮ್ಮದ್ ಸಲೀಂ, ಸೇರಿದಂತೆ ಇನ್ನಿತರೆ ಅಧಿಕಾರಿಗಳ ತಂಡಗಳಿಂದ ದಾಳಿ ನಡೆದಿದೆ.
ಒಟ್ಟು 30 ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಂದ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.
(ಚಿತ್ರ: ಟಿ.ಸಿ ಮುದ್ದುಕುಮಾರ್)

About The Author

You May Also Like

More From Author

+ There are no comments

Add yours