ಸಿದ್ಧಗಂಗಾ ಮಠಕ್ಕೆ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಭೇಟಿ
Tumkurnews
ತುಮಕೂರು: ಗ್ರಾಮೀಣ ಪ್ರದೇಶದಲ್ಲಿ ದೊರೆಯುವ ಕಚ್ಛಾ ವಸ್ತುಗಳನ್ನು ಬಳಸಿಕೊಂಡು ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ ಆರಂಭಿಸಿ, ಅಂತರಾಷ್ಟ್ರೀಯ ಗುಣ ಮಟ್ಟದ ಪದಾರ್ಥಗಳನ್ನು ಉತ್ಪಾದನೆ ಮಾಡಿ ಮಾರುಕಟ್ಟೆ ಮಾಡುವ ಕಾರ್ಯ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಅಗತ್ಯವಾದ ಎಲ್ಲಾ ನೆರವು ನೀಡುತ್ತಿದೆ ಎಂದು ಕೇಂದ್ರದ ಸೂಕ್ಷ್ಮ, ಅತಿಸೂಕ್ಷ್ಮ ಮತ್ತು ಮಧ್ಯಮ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಶನಿವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಅವರು, ಲಿಂ.ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ನಂತರ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮಿಗಳ ಆಶೀರ್ವಾದ ಪಡೆದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಶೋಭಾ ಕರಂದ್ಲಾಜೆ, ಬೇರೆಬೇರೆ ಇಲಾಖೆಗಳಲ್ಲಿ ಯುವಜನರಿಗೆ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ದೇಶದಲ್ಲಿ ಸುಮಾರು 20 ಕೋಟಿ ಜನರು ಸಣ್ಣ ಕೈಗಾರಿಕೆಗಳಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಇಂತಹ ಕೈಗಾರಿಕೆಗಳನ್ನು ಆರಂಭಿಸಿ ಉದ್ಯೋಗ ನೀಡುವ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಅಗತ್ಯ ಸಾಲ, ಸಬ್ಸಿಡಿ ಸೌಲಭ್ಯ ನೀಡುತ್ತದೆ ಎಂದು ಹೇಳಿದರು.
ಉದ್ಯೋಗ ನೀಡುವ ದೃಷ್ಟಿಯಲ್ಲಿ ಹೊರ ದೇಶಗಳ ಕಂಪನಿಗಳು ಕೈಗಾರಿಕೆ ಸ್ಥಾಪನೆ ಮಾಡಲು ನಮ್ಮಲ್ಲಿಗೆ ಬರುತ್ತಿವೆ. ಇಂತಹ ಕಂಪನಿಗಳಲ್ಲಿ ಉದ್ಯೋಗ ಪಡೆಯಲು ನಮ್ಮ ಯುವಜನರನ್ನು ತಾಂತ್ರಿಕ ಕೌಶಲ್ಯದೊಂದಿಗೆ ಸಜ್ಜುಗೊಳಿಸಬೇಕಾಗಿದೆ. ಅಂತಹ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರುಗಳಾದ ಜಿ.ಬಿ ಜ್ಯೋತಿಗಣೇಶ್, ಬಿ.ಸುರೇಶ್‍ಗೌಡ ಮತ್ತಿತರರು ಹಾಜರಿದ್ದರು.
+ There are no comments
Add yours