ಕಾಂಗ್ರೆಸ್ ಸರ್ಕಾರ ಜನವಿರೋಧಿ, ದಲಿತವಿರೋಧಿ:
ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
Tumkurnews
ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಜನವಿರೋಧಿ, ದಲಿತ ವಿರೋಧಿಯಾಗಿದ್ದು, ಭ್ರಷ್ಟಾಚಾರ ನಡೆಸುತ್ತಿದೆ ಎಂದು ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಯಿತು.
ಇದೇ ವೇಳೆ ಸತತ ಮೂರನೇ ಬಾರಿ ಪ್ರಧಾನಿಯಾದ ನರೇಂದ್ರ ಮೋದಿ, ತುಮಕೂರು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ವಿ.ಸೋಮಣ್ಣ, ಚಿತ್ರದುರ್ಗ ಕ್ಷೇತ್ರದ ಸಂಸದ ಗೋವಿಂದ ಕಾರಜೋಳ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಮಂಜುನಾಥ್ ಅವರನ್ನು ಅಭಿನಂದಿಸಿ ಅಭಿನಂದನಾ ನಿರ್ಣಯ ಮಂಡಿಸಲಾಯಿತು.
ತುಮಕೂರು: ಶಿಕ್ಷಕರಿಗೆ ಜಿಪಂ ಸಿಇಒ ತರಾಟೆ
ಶನಿವಾರ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿಯನ್ನು ಮಾಜಿ ಸಂಸದ ಜಿ.ಎಸ್ ಬಸವರಾಜು ಉದ್ಘಾಟಿಸಿ ಮಾತನಾಡಿದರು. ನಮ್ಮ ಜಿಲ್ಲೆ ವ್ಯಾಪ್ತಿಯ ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಗೆಲುವು ಪಡೆದಿದ್ದು, ಈ ಗೆಲುವಿಗೆ ನಮ್ಮಲ್ಲಿರುವ ಒಗ್ಗಟ್ಟು, ಹೋರಾಟ, ಬದ್ಧತೆ ಕಾರಣ. ಮುಂಬರುವ ಚುನಾವಣೆಗಳಲ್ಲೂ ಇದೇ ಬದ್ಧತೆ ಪ್ರದರ್ಶಿಸಿ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಮನವಿ ಮಾಡಿದರು.
ಶಾಸಕರಾದ ಜಿ.ಬಿ ಜ್ಯೋತಿಗಣೇಶ್, ಬಿ.ಸುರೇಶ್ಗೌಡ, ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಮಾಜಿ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್, ರಾಜ್ಯ ಬಿಜೆಪಿ ಕಾರ್ಯದರ್ಶಿ ಅಂಬಿಕಾ ಹುಲಿನಾಯ್ಕರ್, ರಾಜ್ಯ ಬಿಜೆಪಿ ಎಸ್.ಟಿ. ಮೋರ್ಚಾ ಉಪಾಧಕ್ಷ ಅನಿಲ್ಕುಮಾರ್, ಜಿಲ್ಲಾ ಬಿಜೆಪಿ ಹಿರಿಯ ಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಶಂಕರಪ್ಪ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಂಗರಾಜು, ಸಂದೀಪ್ಗೌಡ, ಹಾಲೇಗೌಡ, ಕಾರ್ಯದರ್ಶಿ ಹೆಚ್.ಎಂ.ರವೀಶಯ್ಯ ಮೊದಲಾದವರು ಭಾಗವಹಿಸಿದ್ದರು.
ರಾಜ್ಯದಲ್ಲಿ 5 ರೈಲ್ವೆ ಮೇಲ್ಸೇತುವೆ ನಿರ್ಮಾಣ: 350 ಕೋಟಿ ವೆಚ್ಚ: ಸಚಿವ ವಿ.ಸೋಮಣ್ಣ
+ There are no comments
Add yours