ತುಮಕೂರು ನಗರ ಪ್ರವೇಶಿಸುವ ಭಾಗದಲ್ಲಿ ಆಕರ್ಷಕ ಮಹಾದ್ವಾರ ನಿರ್ಮಾಣ: ಸಚಿವ ಸೋಮಣ್ಣ

1 min read

 

ಸಚಿವ ವಿ.ಸೋಮಣ್ಣ ಹುಟ್ಟುಹಬ್ಬ: ಶಾಲಾ ಮಕ್ಕಳಿಗೆ ನೋಟ್ ಪುಸ್ತಕ, ಟೈ, ಬೆಲ್ಟ್, ಸಿಹಿ ವಿತರಣೆ

Tumkurnews
ತುಮಕೂರು: ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ 74ನೇ ಜನ್ಮದಿನದ ಅಂಗವಾಗಿ ಶನಿವಾರ ನಗರದ ವಿವಿಧೆಡೆ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಸಚಿವ ಸೋಮಣ್ಣ, ಬೆಳಗ್ಗೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಡಾ.ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ನಂತರ ಸಿದ್ಧಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ರಾಜ್ಯದಲ್ಲಿ 5 ರೈಲ್ವೆ ಮೇಲ್ಸೇತುವೆ ನಿರ್ಮಾಣ: 350 ಕೋಟಿ ವೆಚ್ಚ: ಸಚಿವ ವಿ.ಸೋಮಣ್ಣ
ಸಚಿವರ ಜನ್ಮದಿನ ಆಚರಣೆ ಪ್ರಯುಕ್ತ ಕ್ಯಾತ್ಸಂದ್ರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ವಿ.ಸೋಮಣ್ಣ ಅಭಿಮಾನಿ ಬಳಗದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಚಿವ ಸೋಮಣ್ಣ ಭಾಗವಹಿಸಿ ಅಭಿಮಾನಿಗಳಿಂದ ಜನ್ಮದಿನದ ಶುಭಾಶಯ ಸ್ವೀಕರಿಸಿದರು.
ಈ ವೇಳೆ ಮಾತನಾಡಿದ ಸಚಿವ ಸೋಮಣ್ಣ, ನಾನು ಯವತ್ತೂ ಹುಟ್ಟು ಹಬ್ಬ ಆಚರಣೆಗೆ ಶಾಲಾ ಮಕ್ಕಳನ್ನು ಬಳಸಿಕೊಂಡಿಲ್ಲ, ಆದರೆ ಶಾಲಾ ಮಕ್ಕಳಿಗೆ ಸಿಹಿ ಕಳುಹಿಸಿಕೊಟ್ಟು ಆನಂದಪಟ್ಟಿದ್ದೆ. ಈ ಬಾರಿ ಈ ಶಾಲಾ ಮಕ್ಕಳ ಜೊತೆ ಭಾಗವಹಿಸಲು ಅವಕಾಶ ಸಿಕ್ಕಿದೆ ಎಂದರು.
ಬೆಂಗಳೂರು ಕಡೆಯಿಂದ ತುಮಕೂರು ನಗರ ಪ್ರವೇಶಿಸುವ ಭಾಗದಲ್ಲಿ ಆಕರ್ಷಕ ಮಹಾದ್ವಾರ ನಿರ್ಮಾಣ ಮಾಡುವ ಸಂಬಂಧ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುವುದಾಗಿ ಸಚಿವ ಸೋಮಣ್ಣ ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಭಾರತವನ್ನು ಮುನ್ನಡೆಸುವ ಹೊಣೆಗಾರಿಕೆ ಮಕ್ಕಳ ಮೇಲಿದೆ. ಶಿಕ್ಷಕರು ಮಕ್ಕಳಲ್ಲಿ ದೇಶಪ್ರೇಮ ಮೂಡಿಸಿ, ಜವಾಬ್ದಾರಿಯುತ ಪ್ರಜೆಗಳನ್ನಾಗಿ ರೂಪಿಸಿಬೇಕು ಎಂದು ಸಲಹೆ ನೀಡಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಕ್ಯಾತ್ಸಂದ್ರದ ಈ ಶಾಲೆಗೆ 123 ವರ್ಷ ತುಂಬಿದೆ. ಅನೇಕ ಮಹನೀಯರು ಈ ಶಾಲೆಯಲ್ಲಿ ಓದಿ ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆದಿದ್ದಾರೆ. ಈ ಶಾಲೆಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಕರ್ಯ ಮಾಡಿಕೊಡುವುದಾಗಿ ಹೇಳಿದರು.

ಕಾಂಗ್ರೆಸ್ ಸರ್ಕಾರ ಜನವಿರೋಧಿ, ದಲಿತವಿರೋಧಿ: ತುಮಕೂರು ಬಿಜೆಪಿ ಕಿಡಿ
ಗ್ರಾಮಾಂತರ ಕ್ಷೇತ್ರ ಶಾಸಕ ಬಿ.ಸುರೇಶ್‍ಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು, ಬಿಜೆಪಿ ಮುಖಂಡ ಎಸ್.ಪಿ.ಚಿದಾನಂದ್, ಡಿಡಿಪಿಐ ಮಂಜುನಾಥ್, ನಗರ ಪಾಲಿಕೆ ಮಾಜಿ ಸದಸ್ಯರು, ವಿವಿಧ ಸಂಘಸಂಸ್ಥೆಗಳ ಪ್ರಮುಖರು, ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕೆ.ಅರವಿಂದ್, ಮುಖಂಡರಾದ ಗಂಗಹನುಮಯ್ಯ, ಶಿವರಾಜ್, ರತ್ನಮ್ಮ, ಅನ್ಸರ್ ಪಾಷ, ದಯಾನಂದ್, ನಾಗೇಶ್ ಮೊದಲಾದವರು ಭಾಗವಹಿಸಿದ್ದರು.

ತುಮಕೂರು: ಮಕ್ಕಳು ಕಲಿಕೆಯಲ್ಲಿ ಹಿಂದುಳಿದರೆ ಶಿಕ್ಷಕರ ವೇತನ, ಬಡ್ತಿ ಕಟ್!
ಈ ವೇಳೆ ಸಚಿವ ವಿ.ಸೋಮಣ್ಣ ಅವರು ನಗರ ಪಾಲಿಕೆಯ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಿದರು. ಶಾಲಾ ಮಕ್ಕಳಿಗೆ ನೋಟ್ ಪುಸ್ತಕ, ಟೈ, ಬೆಲ್ಟ್, ಸಿಹಿ ವಿತರಿಸಲಾಯಿತು.

 

About The Author

You May Also Like

More From Author

+ There are no comments

Add yours