ವಸಂತ ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

1 min read

 

ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಜಿಲ್ಲಾಧಿಕಾರಿ ಭೇಟಿ

Tumkurnews
ತುಮಕೂರು: ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ವತಿಯಿಂದ ಅಂದಾಜು 107ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡು ಅಂತಿಮ ಹಂತದಲ್ಲಿರುವ 30 ಎಂಎಲ್‍ಡಿ ತೃತೀಯ ಹಂತದ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಸೋಮವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲೆಗೆ ಹೇಮಾವತಿ ನೀರು: ಸಾರ್ವಜನಿಕರು ಎಚ್ಚರಿಕೆಯಿಂದಿರಲು ಡಿಸಿ ಮನವಿ

ಈ ವೇಳೆ ಸ್ಥಳದಲ್ಲಿದ್ದ ಕೆಐಎಡಿಬಿ ಕಾರ್ಯನಿರ್ವಾಹಕ ಇಂಜಿನಿಯರ್ ಲಕ್ಷ್ಮೀಶ್ ಮಾತನಾಡಿ, ತ್ಯಾಜ್ಯ ನೀರನ್ನು 2ನೇ ಹಂತದಲ್ಲಿ ಶುದ್ಧೀಕರಣಗೊಳಿಸಿ ಭೀಮಸಂದ್ರ ಕೆರೆಗೆ ಬಿಟ್ಟಿದ್ದು, ಸದರಿ ನೀರನ್ನು ವಸಂತ ನರಸಾಪುರ ಪ್ರದೇಶದಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ ಶುದ್ಧೀಕರಿಸಲಾಗುವುದು. ಶುದ್ಧೀಕರಿಸಿದ ನೀರನ್ನು ಕೈಗಾರಿಕಾ ಪ್ರದೇಶಗಳಲ್ಲಿ ಅನುಷ್ಟಾನಗೊಂಡಿರುವ ಕೈಗಾರಿಕಾ ಘಟಕಗಳ ಕಾರ್ಯ ಚಟುವಟಿಕೆಗಳಿಗೆ ಸರಬರಾಜು ಮಾಡಲಾಗುವುದು. ನವೆಂಬರ್-ಡಿಸೆಂಬರ್ ಮಾಹೆಯಲ್ಲಿ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಕೊರಟಗೆರೆ ತಾಲ್ಲೂಕಿಗೆ ಜಿಪಂ ಸಿಇಒ ದಿಢೀರ್ ಭೇಟಿ; ಪರಿಶೀಲನೆ
ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರವಿಕುಮಾರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ತುಮಕೂರು ನಗರ ಪ್ರವೇಶಿಸುವ ಭಾಗದಲ್ಲಿ ಆಕರ್ಷಕ ಮಹಾದ್ವಾರ ನಿರ್ಮಾಣ: ಸಚಿವ ಸೋಮಣ್ಣ

About The Author

You May Also Like

More From Author

+ There are no comments

Add yours