ತುಮಕೂರು ನಗರಕ್ಕೆ ಪ್ರವೇಶಿಸಿದ ಹೇಮಾವತಿ: ಜಿಲ್ಲಾಧಿಕಾರಿ
Tumkurnews
ತುಮಕೂರು: ಹೇಮಾವತಿ ಯೋಜನೆ ವ್ಯಾಪ್ತಿಯ ಜಿಲ್ಲೆಯ ನಾಲೆಗಳಿಗೆ ಈಗಾಗಲೇ ನೀರು ಹರಿಯುತ್ತಿದ್ದು, ತುಮಕೂರು ನಗರಕ್ಕೆ ಇಂದು ಬೆಳಿಗ್ಗೆ 9 ಗಂಟೆಗೆ ಪ್ರವೇಶಿಸಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಜಿಲ್ಲೆಗೆ ಹೇಮಾವತಿ ನೀರು: ಸಾರ್ವಜನಿಕರು ಎಚ್ಚರಿಕೆಯಿಂದಿರಲು ಡಿಸಿ ಮನವಿ
ಪ್ರಸ್ತುತ ಕಡಿಮೆ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ಯಾವುದೇ ಸಮಯದಲ್ಲಿ ನೀರಿನ ಒಳಹರಿವು ಹೆಚ್ಚಳವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಮೇಲೆ ಪೋಷಕರು ನಿಗಾವಹಿಸಬೇಕು.
ಮಕ್ಕಳು ಶಾಲೆ ಬಿಟ್ಟ ತಕ್ಷಣ ಮನೆ ಸೇರಬೇಕು. ನಾಲೆ ನೀರಿನಲ್ಲಿ ಈಜಲು ಹೋಗಬಾರದು. ನಾಲೆಯ ಬಳಿ ಸುಳಿದಾಡದಂತೆ ಎಚ್ಚರಿಕೆ ವಹಿಸಬೇಕೆಂದು ಶಾಲಾ ಮಕ್ಕಳಿಗೆ ತಿಳಿಹೇಳುವಂತೆ ಎಲ್ಲಾ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶಿಸಿದರು.
ತುಮಕೂರು: ಕೆಎಸ್ಆರ್ಟಿಸಿ ಹೊಸ ಬಸ್ ನಿಲ್ದಾಣ ಜು.27ರಿಂದ ಆರಂಭ
ಇಂದಿನ ವರದಿಯನುಸಾರ ತುಮಕೂರು ನಾಲಾ ವಲಯದಲ್ಲಿ 1150 ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ಗರಿಷ್ಠ ಪ್ರಮಾಣದ ನೀರನ್ನು ಕೆರೆ-ಕಟ್ಟೆಗಳಿಗೆ ಭರ್ತಿ ಮಾಡಲು ಕ್ರಮಕೈಗೊಳ್ಳಬೇಕು. ಕಳೆದ ವರ್ಷದಲ್ಲಿ ಜಿಲ್ಲೆಗೆ ಅಗತ್ಯವಿರುವ ನೀರು ಪಡೆಯಲು ಸಾಧ್ಯವಾಗದೆ ನೀರಿನ ಸಮಸ್ಯೆ ಎದುರಾಗಿತ್ತು. ಈ ವರ್ಷ ಜಿಲ್ಲೆಗೆ ನೀರಿನ ಸಮಸ್ಯೆ ಬಾರದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.




+ There are no comments
Add yours