ಗ್ರಂಥಪಾಲಕರ ದಿನಾಚರಣೆ ಪ್ರಯುಕ್ತ ವಿವಿಧ ಸ್ಪರ್ಧೆ
Tumkurnews
ತುಮಕೂರು: ಗ್ರಂಥಾಲಯ ಪಿತಾಮಹ ಎಸ್.ಆರ್.ರಂಗನಾಥ್ ಅವರ ಜನ್ಮ ದಿನದ ಅಂಗವಾಗಿ ಆಗಸ್ಟ್ 12ರಂದು ಗ್ರಂಥ ಪಾಲಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ದಿನಾಚರಣೆ ಪ್ರಯುಕ್ತ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಗರ ಕೇಂದ್ರ ಗ್ರಂಥಾಲಯದಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ನಗರ ಕೆಂದ್ರ ಗ್ರಂಥಾಲಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ತುಮಕೂರು: KSRTC ಹೊಸ ಬಸ್ ನಿಲ್ದಾಣದಲ್ಲಿ ಜನವೋ ಜನ! ವಿಡಿಯೋ
ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಆಗಸ್ಟ್ 6ರಂದು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸ್ಮಾರ್ಟ್ ಸಿಟಿ ನಗರ ಕೇಂದ್ರ ಗ್ರಂಥಾಲಯದ ಪಾತ್ರ ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆ ಹಾಗೂ ರಸ ಪ್ರಶ್ನೆ ಸ್ಪರ್ಧೆ; ಆಗಸ್ಟ್ 7ರಂದು ಭಾವಗೀತೆ ಹಾಗೂ ಜನಪದ ಗೀತೆ ಸ್ಪರ್ಧೆ ಏರ್ಪಡಿಸಲಾಗಿದೆ.
ಪ್ರಾಥಮಿಕ ಶಾಲೆ(4 ರಿಂದ 7ನೇ ತರಗತಿ)ಯ ಮಕ್ಕಳಿಗಾಗಿ ಪರಿಸರ ವಿಷಯ ಕುರಿತು ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಛಿಸುವ ವಿದ್ಯಾರ್ಥಿಗಳು ಆಗಸ್ಟ್ 5ರ ಸಂಜೆ 5 ಗಂಟೆಯೊಳಗೆ ನಗರ ಕೇಂದ್ರ ಗ್ರಂಥಾಲಯ ಅಥವಾ ದೂರವಾಣಿ ಸಂಖ್ಯೆ 0816-2955816ನ್ನು ಸಂಪರ್ಕಿಸಬಹುದಾಗಿದೆ.
ತುಮಕೂರು: ಕಿಕ್ಕಿರಿದು ತುಂಬಿದ್ದ ಬಸ್ ನಿಲ್ದಾಣ ಹತ್ತೇ ನಿಮಿಷದಲ್ಲಿ ಖಾಲಿ! ವಿಡಿಯೋ
ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸುವವರು ಚಿತ್ರಕಲೆಗೆ ಬೇಕಾದ (ಚಿತ್ರಕಲೆ ಶೀಟ್ ಹೊರತು ಪಡಿಸಿ)ಸಲಕರಣೆಗಳನ್ನು ವಿದ್ಯಾರ್ಥಿಗಳೇ ತರತಕ್ಕದ್ದು ಎಂದು ಅವರು ತಿಳಿಸಿದ್ದಾರೆ.
+ There are no comments
Add yours