ಮುಕ್ತ ವಿವಿ: ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್’ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

1 min read

 

ಮುಕ್ತ ವಿವಿ: ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್’ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Tumkurnews
ಮೈಸೂರು: ಮೈಸೂರಿನ ಕರಾಮುವಿಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಯುಜಿಸಿ ಅನುಮೋದಿತ ಕೋರ್ಸ್’ಗಳ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ, ಸ್ನಾತಕೋತ್ತರ ಕೋರ್ಸ್’ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್‌.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ.

ತುಮಕೂರು: ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ. ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯಗಳ ದೂರ ಶಿಕ್ಷಣದ ಪದವಿ ಮತ್ತು ಸಾಂಪ್ರದಾಯಿಕ ವಿವಿಗಳು ನೀಡುವ ಶಿಕ್ಷಣ ಕ್ರಮಗಳ ಪದವಿಗಳಿಗೆ ಸಮನಾಗಿರುತ್ತದೆ.
ಪ್ರಥಮ ವರ್ಷದ ಪ್ರವೇಶಾತಿ ಶುಲ್ಕದ ವಿವರ: ಬಿ.ಎ-ರೂ.8,400/-., ಬಿ.ಕಾಂ.-ರೂ.8,900/-.,ಬಿ.ಬಿ.ಎ/ಬಿ.ಎಲ್.ಐ.ಎಸ್ಸಿ-12,400/-., ಬಿ.ಸಿ.ಎ/ಬಿ.ಎಸ್ಸಿ-ರೂ.23,900/-., ಬಿ.ಎಸ್.ಡಬ್ಲ್ಯೂ-ರೂ.12,900/-., ಎಂ.ಎ-ರೂ.10,600/-., ಎಂ.ಸಿ.ಜೆ-ರೂ.16,200/-., ಎಂ.ಕಾಂ-ರೂ.12,400/-., ಎಂ.ಬಿ.ಎ–ರೂ.29,900/-.‌, ಎಂ.ಎಸ್ಸಿ/ಎಂ.ಸಿ.ಎ-ರೂ.29,700/-., ಎಂ.ಎಸ್.ಡಬ್ಲ್ಯೂ-ರೂ.21,300/-., ಎಂ.ಎಲ್.ಐ.ಎಸ್ಸಿ-ರೂ.18,150/-ಗಳಾಗಿರುತ್ತದೆ.

ತುಮಕೂರು: KSRTC ಹೊಸ ಬಸ್ ನಿಲ್ದಾಣದಲ್ಲಿ ಜನವೋ ಜನ! ವಿಡಿಯೋ
ಬೋಧನಾ ಶುಲ್ಕ ರಿಯಾಯಿತಿ:
ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ , ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ, ಕ್ಯಾಬ್ ಚಾಲಕರು ಮತ್ತು ಅವರ ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ, KSRTC, BMTC ನೌಕರರಿಗೆ ಸ್ನಾತಕ, ಸ್ನಾತಕೋತ್ತರ ಪದವಿಗಳ ಬೋಧನಾ ಶುಲ್ಕದಲ್ಲಿ 10% ರಿಯಾಯಿತಿ ಇರುತ್ತದೆ.
ಉಚಿತ ಪ್ರವೇಶಾತಿ:
ಕೋವಿಡ್ ನಿಂದ ಮರಣ ಹೊಂದಿದ ಪೋಷಕ ಮಕ್ಕಳಿಗೆ, ಟ್ರಾನ್ಸ್ ಜೆಂಡರ್, ತೃತೀಯ ಲಿಂಗಿಗಳಿಗೆ, ದೃಷ್ಟಿ ಹೀನ ವಿದ್ಯಾರ್ಥಿಗಳಿಗೆ (ಬಿ.ಎಡ್/ಎಂ.ಬಿ.ಎ ಹೊರತು ಪಡಿಸಿ) ಉಚಿತ ಪ್ರವೇಶಾತಿ ನೀಡಲಾಗುತ್ತಿದೆ.
ಹೆಚ್ಚಿನ ವಿವರಗಳಿಗಾಗಿ: ಪ್ರಾದೇಶಿಕ ನಿರ್ದೇಶಕರು, ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

ತುಮಕೂರು: ಜಿಲ್ಲೆಯಲ್ಲಿ ಡೆಂಗ್ಯೂ ಹೆಚ್ಚಳ: ಶಾಲಾ ಮಕ್ಕಳ ಬಗ್ಗೆ ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ

About The Author

You May Also Like

More From Author

+ There are no comments

Add yours