ಮತ್ತೆ 12 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ ಭರವಸೆ
Tumkurnews
ತುಮಕೂರು: ಶಾಲಾ ಶಿಕ್ಷಕರ ಕೊರತೆ ನೀಗಿಸುವ ಸಲುವಾಗಿ ಈಗಾಗಲೇ 12,000 ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದ್ದು, ಹೆಚ್ಚುವರಿಯಾಗಿ ಇನ್ನು 12,000 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಇಲ್ಲಿನ ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಶೈಕ್ಷಣಿಕ ವರ್ಷಾರಂಭಕ್ಕೆ ಮುನ್ನವೇ 50,000 ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಅಲ್ಲದೆ ಅನುದಾನಿತ ಶಾಲೆಗಳಲ್ಲಿ 5 ವರ್ಷಗಳಿಂದಲೂ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ 2,000 ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯಲಾಗಿದ್ದು, 1008 ಅಂಗನವಾಡಿಗಳಲ್ಲಿ ಎಲ್‍ಕೆಜಿ-ಯುಕೆಜಿ ಆರಂಭಿಸಲಾಗಿದೆ. ಕೇವಲ 28 ದಿನಗಳಲ್ಲಿ 32,000 ಮಕ್ಕಳು ದಾಖಲಾಗುವ ಮೂಲಕ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದರು.
ತುಮಕೂರು: ಇನ್ಮುಂದೆ ರಾತ್ರಿ 1 ಗಂಟೆವರೆಗೆ: ದಿನದ 24 ಗಂಟೆ ವ್ಯಾಪಾರ ಮಾಡಬಹುದು! ಸರ್ಕಾರದ ಆದೇಶ
+ There are no comments
Add yours