ತುಮಕೂರು: ಇನ್ಮುಂದೆ ರಾತ್ರಿ 1 ಗಂಟೆವರೆಗೆ: ದಿನದ 24 ಗಂಟೆ ವ್ಯಾಪಾರ ಮಾಡಬಹುದು! ಸರ್ಕಾರದ ಆದೇಶ

1 min read

 

ತುಮಕೂರಿನಲ್ಲಿ ಇನ್ಮುಂದೆ ರಾತ್ರಿ 1 ಗಂಟೆವರೆಗೆ: ದಿನದ 24 ಗಂಟೆ ವ್ಯಾಪಾರ ಮಾಡಬಹುದು! ಮಹತ್ವದ ಆದೇಶ

Tumkurnews
ತುಮಕೂರು: ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಅನ್ವಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಗಳಲ್ಲಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 1 ಗಂಟೆಯವರೆಗೆ ವ್ಯಾಪಾರ ಮಾಡಲು ಅನುಕೂಲ ಮಾಡಿಕೊಟ್ಟಿದೆ ಎಂದು ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಟಿ ಜೆ ಗಿರೀಶ್ ತಿಳಿಸಿದ್ದಾರೆ.

ತುಮಕೂರು: ರೈತರಿಂದ ಹಲಸಿನ ಹಣ್ಣಿನ ನೇರ ಮಾರಾಟ
ಕಾರ್ಮಿಕ ಇಲಾಖೆಯ ಅಧಿಸೂಚನೆಯಂತೆ 10 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯ ನೌಕರರನ್ನು ಹೊಂದಿರುವ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ದಿನದ 24 ಗಂಟೆಗಳು ವ್ಯಾಪಾರ ಮಾಡಲು ಅನುಕೂಲತೆಯನ್ನು ಮಾಡಿಕೊಡಲಾಗಿದೆ.
ಈ ಅನುಕೂಲತೆಯನ್ನು ತುಮಕೂರು ನಗರದ ಎಲ್ಲಾ ವ್ಯಾಪಾರಸ್ಥರು, ಉದ್ಯಮ ಸಂಸ್ಥೆಗಳು ಸದುಪಯೋಗ ಪಡಿಸಿಕೊಳ್ಳುವ ಮೂಲಕ ತಮ್ಮ ವ್ಯಾಪಾರ, ವ್ಯವಹಾರ ಚಟುವಟಿಕೆಗಳನ್ನು ಹೆಚ್ಚಿಸಿಕೊಳ್ಳಬೇಕು ಹಾಗೂ ನಗರದ ನಾಗರಿಕರು ಈ ಸದುಪಯೋಗವನ್ನು ಪಡೆಯಬೇಕೆಂದು ಅವರು ಮನವಿ ಮಾಡಿದ್ದಾರೆ.

ವಸಂತ ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ
ಎಸ್ಪಿಗೆ ಮನವಿ: ಮೇಲ್ಕಂಡ ಆದೇಶದಿಂದಾಗಿ ಹೊರ ಊರುಗಳಿಂದ ಬರುವ ಪ್ರಯಾಣಿಕರಿಗೆ ತುಮಕೂರಿನಿಂದ ಹಾದುಹೋಗುವ ಪ್ರಯಾಣಿಕರಿಗೆ ಬಹಳ ಉಪಯೋಗವಾಗುತ್ತದೆ, ಇದರಿಂದ ಸರ್ಕಾರಕ್ಕೂ ರೆವಿನ್ಯೂ ಹೆಚ್ಚಾಗುತ್ತದೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಅವರನ್ನು ಭೇಟಿ ಮಾಡಿ ಈ ಆದೇಶದಂತೆ ರಾತ್ರಿ ವೇಳೆಯಲ್ಲಿ ವ್ಯಾಪಾರ ವಹಿವಾಟು ನಡೆಸುವ ಉದ್ಯಮಗಳಿಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ, ಅಡಚಣೆ ಆಗದಂತೆ ಭಯವಿಲ್ಲದೆ ವ್ಯಾಪಾರ ಮಾಡಲು ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಗಸ್ತನ್ನು ಹೆಚ್ಚಿಸುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಸ್ಪಂದಿಸಿದ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳು ಸಹಮತವನ್ನು ವ್ಯಕ್ತಪಡಿಸಿದ್ದಾರೆ ಎಂದು ಟಿ.ಜೆ ಗಿರೀಶ್ ಅವರು ಹೇಳಿದ್ದಾರೆ.

ತುಮಕೂರು: KSRTC ಹೊಸ ಬಸ್ ನಿಲ್ದಾಣದಲ್ಲಿ ಜನವೋ ಜನ! ವಿಡಿಯೋ
ರಾಜ್ಯ ಸರ್ಕಾರದ ಈ ಆದೇಶದಿಂದ ತುಮಕೂರು ನಗರದ ನಾಗರಿಕರಿಗೆ ವ್ಯಾಪಾರಸ್ಥರಿಗೆ ಉದ್ದಿಮೆದಾರರಿಗೆ ಅನುಕೂಲವಾಗುತ್ತದೆ. ಬಿಬಿಎಂಪಿ ವ್ಯಾಪ್ತಿಯ ಈ ಆದೇಶವನ್ನು ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಸ್ವಾಗತಿಸುತ್ತದೆ ಎಂದು ಟಿ.ಜೆ. ಗಿರೀಶ್ ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours