ತೆಂಗು ಪಾರ್ಕ್ ಸ್ಥಾಪನೆಗೆ ಪರಮೇಶ್ವರ್ ಒಲವು: ಹೂವು, ತರಕಾರಿ, ಸೊಪ್ಪು ಬೆಳೆಗೆ ಪ್ರೋತ್ಸಾಹ
Tumkurnews
ತುಮಕೂರು: ಕಲ್ಪತರು ನಾಡು ಜಿಲ್ಲೆ ಎಂದು ಪ್ರಸಿದ್ಧಿ ಹೊಂದಿರುವ ತುಮಕೂರು ಜಿಲ್ಲೆಯಲ್ಲಿ ತೆಂಗಿನ ಬೆಳೆ ಪ್ರಮುಖ ಬೆಳೆಯಾಗಿದ್ದು, ತೆಂಗು ಬೆಳೆಯನ್ನು ಅಭಿವೃದ್ಧಿ ಪಡಿಸುವುದರ ಜೊತೆಗೆ ವಿವಿಧ ರೀತಿಯ ತೆಂಗಿನ ಉತ್ಪನ್ನಗಳ ತಯಾರಿಕೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ತೆಂಗು ಪಾರ್ಕ್ ನಿರ್ಮಾಣ ಮಾಡುವ ಬಗ್ಗೆ ಆಸಕ್ತಿ ತೋರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಅಧಿಕಾರಿಗಳಿಗೆ ತಿಳಿಸಿದರು.
ತುಮಕೂರು: ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಂದ ತಪ್ಪು ಮಾಹಿತಿ: ಪರಮೇಶ್ವರ್ ಅಸಮಾಧಾನ
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ತೆಂಗು ಪಾರ್ಕ್ ನಿರ್ಮಾಣ ಮಾಡುವ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗಾಗಿ 1,71,435 ರೈತರಿಗೆ ಈವರೆಗೂ 17,278 ಕ್ವಿಂಟಾಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ಪ್ರಸಕ್ತ ವರ್ಷ ವಾಡಿಕೆಗಿಂತ ಹೆಚ್ಚಿನ ಅಂದರೆ 428 ಮೀ.ಮೀ. ಮಳೆಯಾಗಿದ್ದು, ಮುಂಗಾರು ಹಂಗಾಮಿನಲ್ಲಿ ಈವರೆಗೆ 2,17,128(76%) ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದ್ದು, ಪಾವಗಡ ತಾಲ್ಲೂಕಿನ ಕೆಲವೆಡೆ ನಿರೀಕ್ಷಿತ ಪ್ರಮಾಣದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿಲ್ಲ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
12 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 1,21,843 ರೈತರು ನೋಂದಾಯಿಸಿಕೊಂಡಿದ್ದು, 2023-24ನೇ ಸಾಲಿನಲ್ಲಿ ನೋಂದಣಿಯಾದ 74850 ರೈತರಿಗೆ ಒಟ್ಟು 6780 ಲಕ್ಷ ರೂ.ಗಳ ವಿಮಾ ಪರಿಹಾರ ವಿತರಿಸಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಆಗಸ್ಟ್ ಮತ್ತು ಸೆಪ್ಟೆಂಬರ್ ಮಾಹೆಯಲ್ಲಿ ಉತ್ತಮ ಮಳೆಯಾಗುವ ಮಾಹಿತಿಯಿದ್ದು, ಸಿರಿಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕ ರಮೇಶ್ ಸಭೆಗೆ ಮಾಹಿತಿ ನೀಡಿದರು.
ತುಮಕೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ನಿರ್ಲಕ್ಷ್ಯ: ಪರಮೇಶ್ವರ್ ತರಾಟೆ
ಸಚಿವರು ತೋಟಗಾರಿಕಾ ಇಲಾಖೆ ಪ್ರಗತಿ ಪರಿಶೀಲಿಸುತ್ತಾ, ಜಿಲ್ಲೆಯಲ್ಲಿ ತೋಟಗಾರಿಕೆ ವಿಸ್ತರಣೆ ಸಮರ್ಪಕವಾಗಿ ಆಗುತ್ತಿಲ್ಲ. ಹೂವು, ತರಕಾರಿ, ಸೊಪ್ಪು ಬೆಳೆಯುವ ರೈತರಿಗೆ ಆರ್ಥಿಕ ಸೌಲಭ್ಯ ಒದಗಿಸಲು ವಿನೂತನ ಕಾರ್ಯಕ್ರಮಗಳನ್ನು ರೂಪಿಸಬೇಕು. ಜಿಲ್ಲೆಯ ಎಲ್ಲಾ ರೈತರು ಅಡಿಕೆ ಬೆಳೆಯನ್ನು ಬೆಳೆಯಲು ಆಸಕ್ತಿ ತೋರಿದರೆ ಮುಂದೊಂದು ದಿನ ಅಡಿಕೆ ಬೆಳೆಯನ್ನು ಕೇಳುವರಿಲ್ಲದಂತಾಗುತ್ತದೆ. ಈ ನಿಟ್ಟಿನಲ್ಲಿ ಪರ್ಯಾಯ ಬೆಳೆಗಳನ್ನು ಬೆಳೆಯುವಂತೆ ರೈತರಿಗೆ ಅರಿವು ಮೂಡಿಸಬೇಕು. ನರೇಗಾ ಯೋಜನೆ ಅನುಷ್ಠಾನದಲ್ಲಿ ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ಪ್ರಗತಿ ಸಾಧಿಸಬೇಕೆಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಾರದಮ್ಮ ಅವರಿಗೆ ಸೂಚನೆ ನೀಡಿದರು.
ತುಮಕೂರು: ಇನ್ಮುಂದೆ ರಾತ್ರಿ 1 ಗಂಟೆವರೆಗೆ: ದಿನದ 24 ಗಂಟೆ ವ್ಯಾಪಾರ ಮಾಡಬಹುದು! ಸರ್ಕಾರದ ಆದೇಶ
ಸಭೆಯಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಸಂಸದ ಗೋವಿಂದ ಕಾರಜೋಳ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್, ಡಾ: ಹೆಚ್.ಡಿ. ರಂಗನಾಥ್, ಕೆ.ಷಡಾಕ್ಷರಿ, ಎಂ.ಟಿ.ಕೃಷ್ಣಪ್ಪ, ಬಿ.ಸುರೇಶ್‍ಗೌಡ, ಹೆಚ್.ವಿ. ವೆಂಕಟೇಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸಿ: ಗೃಹ ಸಚಿವ ಪರಮೇಶ್ವರ್ ಸೂಚನೆ
+ There are no comments
Add yours