ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ನಿರ್ಲಕ್ಷ್ಯ: ಪರಮೇಶ್ವರ್ ತರಾಟೆ
Tumkurnews
ತುಮಕೂರು: ಅನುಮತಿಯಿಲ್ಲದೆ ಕೆಡಿಪಿ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ನೀಡಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಅವರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರಿಗೆ ಸೂಚನೆ ನೀಡಿದರು.
ತುಮಕೂರು: ಇನ್ಮುಂದೆ ರಾತ್ರಿ 1 ಗಂಟೆವರೆಗೆ: ದಿನದ 24 ಗಂಟೆ ವ್ಯಾಪಾರ ಮಾಡಬಹುದು! ಸರ್ಕಾರದ ಆದೇಶ
ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿಂದು ನಡೆದ ಕೆ.ಡಿ.ಪಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಶಿಸ್ತು ಬದ್ದವಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಿದಾಗ ಮಾತ್ರ ಸಮರ್ಪಕವಾಗಿ ಸರ್ಕಾರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯ. ಸಭೆಗೆ ಪೂರ್ವ ತಯಾರಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಸಕ್ರಿಯ ಡೆಂಗ್ಯೂ ಪ್ರಕರಣಗಳ ಬಗ್ಗೆ ಸಚಿವರು ಪರಿಶೀಲಿಸಿದ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಡಿ.ಎನ್. ಮಂಜುನಾಥ್ ಮಾಹಿತಿ ನೀಡುತ್ತಾ, ಜಿಲ್ಲೆಯಲ್ಲಿ ಈವರೆಗೆ 4059 ರಕ್ತ ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು, 604 ಪ್ರಕರಣಗಳಲ್ಲಿ ಡೆಂಗ್ಯೂ ದೃಢಪಟ್ಟಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ 41 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 3 ಮಂದಿ ಐಸಿಯುನಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 10 ಮಂದಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು, ಒಬ್ಬ ರೋಗಿಯು ಐಸಿಯುನಲ್ಲಿ ದಾಖಲಾಗಿದ್ದಾರೆ ಎಂದು ಸಭೆಗೆ ತಿಳಿಸಿದರು.
ತುಮಕೂರು: ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಂದ ತಪ್ಪು ಮಾಹಿತಿ: ಪರಮೇಶ್ವರ್ ಅಸಮಾಧಾನ
ಜಿಲ್ಲೆಯಲ್ಲಿರುವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ಕರ್ತವ್ಯಕ್ಕೆ ಹಾಜರಾಗದಿರುವ ಬಗ್ಗೆ ಸಾರ್ವಜನಿಕರಿಂದ ದೂರಗಳು ಕೇಳಿ ಬರುತ್ತಿದ್ದು, ಸಮರ್ಪಕವಾಗಿ ಕಾರ್ಯ ನಿರ್ವಹಿಸದ ವೈದ್ಯರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳಿಗೆ ಜಿಲ್ಲಾ ಕೇಂದ್ರದಲ್ಲೇ ಚಿಕಿತ್ಸೆ ನೀಡಬೇಕು. ತುರ್ತು ಸಂಧರ್ಭದಲ್ಲಿ ಮಾತ್ರ ಬೇರೆ ಆಸ್ಪತ್ರೆಗಳಿಗೆ ತೆರಳಲು ಸೂಚನೆ ನೀಡಬೇಕು ಎಂದು ನಿರ್ದೇಶನ ನೀಡಿದರು.
12 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ: ಶಿಕ್ಷಣ ಸಚಿವ ಮಧು ಬಂಗಾರಪ್ಪ
+ There are no comments
Add yours