ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
Tumkurnews
ತುಮಕೂರು: ತಾಲ್ಲೂಕು ಹಿಂದುಳಿದ ವರ್ಗಗಳ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ೨೦೨೪-೨೫ನೇ ಸಾಲಿನ ಪ್ರವೆಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೊಸದಾಗಿ ಪ್ರವೇಶ ಬಯಸುವ ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಸೆಪ್ಟೆಂಬರ್ 17ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೧೬-೨೨೫೧೭೩೬ನ್ನು ಸಂಪರ್ಕಿಸಬೇಕೆಂದು ತುಮಕೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಸ್ಥಳ: ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಸಕ್ತರು, “ಗಣೇಶ್ ಸ್ಟೋರ್, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ತುಮಕೂರು” ಇಲ್ಲಿಗೆ ಭೇಟಿ ನೀಡಬಹುದು.
+ There are no comments
Add yours