ಹಾವು ಕಡಿದು ರೈತ ಸಾವು
Tumkurnews
ತುಮಕೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನಿಗೆ ಹಾವು ಕಚ್ಚಿದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ರಂಗಯ್ಯನಪಾಳ್ಯದಲ್ಲಿ ನಡೆದಿದೆ.
ರಂಗಯ್ಯನಪಾಳ್ಯದ ನಿವಾಸಿ ಚಿಕ್ಕೀರಯ್ಯ (65) ಮೃತ ದುರ್ದೈವಿ.
ಈತ ತನ್ನ ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ವಿಷಪೂರಿತ ಹಾವು ಕಚ್ಚಿದೆ. ತಕ್ಷಣ ಇವರನ್ನು ಜಿಲ್ಲಾಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು.
ತುಮಕೂರು: ಇನ್ಮುಂದೆ ರಾತ್ರಿ 1 ಗಂಟೆವರೆಗೆ: ದಿನದ 24 ಗಂಟೆ ವ್ಯಾಪಾರ ಮಾಡಬಹುದು! ಸರ್ಕಾರದ ಆದೇಶ
ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ರೈತ ಚಿಕ್ಕೀರಯ್ಯ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ, ಮಕ್ಕಳು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ರಂಗಯ್ಯನಪಾಳ್ಯದಲ್ಲಿ ನೆರವೇರಿತು.
+ There are no comments
Add yours