ಕೇಂದ್ರ ಸಚಿವ ವಿ.ಸೋಮಣ್ಣನವರ ಕಚೇರಿ ಕಟ್ಟಡ ಹಿಂಪಡೆದ ರಾಜ್ಯ ಸರ್ಕಾರ
ಕಾಂಗ್ರೆಸ್ ಸರ್ಕಾರ: ಎನ್‍ಡಿಎ ಶಾಸಕರ ತೀವ್ರ ಆಕ್ರೋಶ
Tumkurnews
ತುಮಕೂರು: ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಕಚೇರಿ ಉಪಯೋಗಕ್ಕೆ ನಗರದ ರೈಲ್ವೆ ನಿಲ್ದಾಣ ಎದುರಿನ ಪರಿವೀಕ್ಷಣಾ ಕಟ್ಟಡವನ್ನು ನೀಡಿ, ಅನುಮೋದನೆ ಮಾಡಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಅನುಮೋದನೆಯನ್ನು ಹಿಂಪಡೆದಿದ್ದು, ರಾಜ್ಯ ಸರ್ಕಾರದ ಕ್ರಮವನ್ನು ಜಿಲ್ಲೆಯ ಎನ್.ಡಿ.ಎ ಮೈತ್ರಿ ಶಾಸಕರು ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದ ಶಾಸಕರು, ಯಾವುದೇ ಕಾರಣಕ್ಕೂ ಸಚಿವ ವಿ.ಸೋಮಣ್ಣ ಅವರ ಕಚೇರಿಗೆ ನೀಡಿರುವ ಕಟ್ಟಡವನ್ನು ವಾಪಸ್ ನೀಡುವುದಿಲ್ಲ ಎಂದು ಜಂಟಿ ಹೇಳಿಕೆ ನೀಡಿದ್ದಾರೆ.
ನಗರದ ಪರಿವೀಕ್ಷಣಾ ಮಂದಿರದ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತುಮಕೂರು ನಗರ ಕ್ಷೇತ್ರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು, ನಗರದ ಪರಿವೀಕ್ಷಣಾ ಕಟ್ಟಡವನ್ನು ದುರಸ್ತಿಗೊಳಿಸಿ ತುಮಕೂರು ಲೋಕಸಭಾ ಸದಸ್ಯರೂ ಆದ ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಕಚೇರಿ ಆರಂಭಿಸಲು ಅನುಮತಿ ನೀಡಿ ರಾಜ್ಯ ಸರ್ಕಾರ ಈ ತಿಂಗಳ 3ರಂದು ಅನುಮೋದನೆ ನೀಡಿತ್ತು. ಅಂದಿನಿಂದಲೇ ಸಚಿವರ ಕಚೇರಿ ಕೆಲಸಕಾರ್ಯಗಳು ಇಲ್ಲಿ ಪ್ರಾರಂಭವಾಗಿವೆ. ಆದರೆ, ಇಂದು ಶುಕ್ರವಾರ ರಾಜ್ಯ ಸರ್ಕಾರ ಸಚಿವರ ಕಚೇರಿಗೆ ನೀಡಿದ್ದ ಕಟ್ಟಡದ ಅನುಮೋದನೆಯನ್ನು ಹಿಂಪಡೆದಿರುವುದು ಖಂಡನೀಯ ಎಂದರು.
ತುಮಕೂರು: ಸ್ವಾತಂತ್ರ್ಯ ದಿನಾಚರಣೆ ವೇಳೆ ಪ್ಯಾಲಸ್ಥೈನ್ ಬಾವುಟ ಹಾರಿಸಿದ ಕಿಡಿಗೇಡಿಗಳ ಬಂಧನ: ಶಾಸಕ ರಂಗನಾಥ್ ಖಂಡನೆ
ಸಾರ್ವಜನಿಕರ ಪರವಾದ ಕೆಲಸಕಾರ್ಯಗಳಿಗೆ ಬಳಿಕೆಯಾಗುತ್ತಿರುವ ಸಚಿವರ ಈ ಕಚೇರಿ ಕಟ್ಟಡವನ್ನು ಹಿಂಪಡೆಯುವ ಪ್ರಯತ್ನದ ಮೂಲಕ ರಾಜ್ಯ ಸರ್ಕಾರ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ. ಈಗಾಗಲೇ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಈ ಕಚೇರಿಯಲ್ಲಿ ಇಲಾಖೆ ಕೆಲಸ, ಸಾರ್ವಜನಿಕರ ಕೆಲಸಕಾರ್ಯಗಳು ಆರಂಭವಾಗಿದ್ದು ಯಾವುದೇ ಕಾರಣಕ್ಕೂ ಕಚೇರಿಯನ್ನು ವಾಪಸ್ ನೀಡುವುದಿಲ್ಲ. ಸರ್ಕಾರ ಯಾವ ರೀತಿ ವಾಪಸ್ ಪಡೆಯುವುದೋ ನಾವು ನೋಡುತ್ತೇವೆ ಎಂದು ಶಾಸಕ ಜ್ಯೋತಿಗಣೇಶ್ ಸವಾಲು ಹಾಕಿದರು.
ಕೇಂದ್ರ ಸಚಿವ ವಿ.ಸೋಮಣ್ಣ ಅವರು ಅಧಿಕಾರ ವಹಿಸಿಕೊಂಡ ಕೇಲವೇ ದಿನಗಳಲ್ಲಿ ಅನೇಕ ಜನಪರ ಕೆಲಸಗಳಿಗೆ ಚಾಲನೆ ನೀಡಿ, ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 350 ಕೋಟಿ ರೂ. ವೆಚ್ಚದ ರೈಲ್ವೆ ಅಂಡರ್ ಪಾಸ್ ಕಾಮಗಾರಿಗಳಿಗೆ ಅನುಮೋದನೆ ದೊರಕಿಸಿದ್ದಾರೆ. ತುಮಕೂರು-ಬೆಂಗಳೂರು ನಡುವೆ ಸಬ್‍ಅರ್ಬನ್ ರೈಲು ಸಂಚಾರಕ್ಕೆ ಅನುಮೋದನೆ ದೊರೆಯಲು ಕಾರಣರಾಗಿದ್ದಾರೆ. ಇನ್ನೂ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಲಿರುವ ಸಚಿವ ಸೋಮಣ್ಣವರ ಅಭಿವೃದ್ಧಿ ವೇಗ ಕಾಂಗ್ರೆಸ್ ನಾಯಕರಿಗೆ ಸಹಿಸಿಕೊಳ್ಳಲಾಗದೆ, ಕೊಟ್ಟಿರುವ ಕಚೇರಿ ಕಿತ್ತುಕೊಳ್ಳುವ ದ್ವೇಷದ ರಾಜಕಾರಣಕ್ಕೆ ಇಳಿದಿರುವುದನ್ನು ಜಿಲ್ಲೆಯ ಜನ ಸಹಿಸುವುದಿಲ್ಲ. ಅಷ್ಟಾಗಿಯೂ ಸರ್ಕಾರ ಕಚೇರಿ ಕಟ್ಟಡ ವಾಪಸ್ ಪಡೆಯುವ ಪ್ರಯತ್ನ ಮಾಡಿದರೆ ತೀವ್ರ ರೀತಿಯ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ವಾಪಸ್ ಪಡೆಯುವ ದಂಧೆಗಿಳಿದಿದೆಯೆ?:
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಚಿಕ್ಕನಾಯಕನಹಳ್ಳಿ ಕ್ಷೇತ್ರ ಶಾಸಕ ಸಿ.ಬಿ.ಸುರೇಶ್‍ಬಾಬು ಮಾತನಾಡಿ, ಕೇಂದ್ರ ಸಚಿವರ ಕಚೇರಿಗೆಂದು ಕೊಟ್ಟ ಕಟ್ಟಡವನ್ನು ವಾಪಸ್ ಪಡೆಯಲು ರಾಜ್ಯ ಸರ್ಕರ ಹೊರಟಿದೆ. ಒಮ್ಮೆ ಕೊಟ್ಟು ಮತ್ತೆ ವಾಪಸ್ ಪಡೆಯುವುದನ್ನು ಕಾಂಗ್ರೆಸ್ ಸರ್ಕಾರ ದಂಧೆ ಮಾಡಿಕೊಂಡಂತಿದೆ ಎಂದು ಟೀಕಿಸಿದರು.
ಲಂಡನ್ ನೆನಪಿಸುವ ತುಮಕೂರಿನ ಹೊಸ ಬಸ್ ನಿಲ್ದಾಣ!: ಜನಾಕರ್ಷಣೆ ಎಸ್ಕಲೇಟರ್! ವಿಡಿಯೋ
ಕಚೇರಿ ಜಾಗವನ್ನು ಸರ್ಕಾರ ಸಚಿವರ ಸ್ವಂತಕ್ಕೆ ನೀಡಿಲ್ಲ, ಕೇಂದ್ರ ಸರ್ಕಾರದ ಮಂತ್ರಿಯಾಗಿ ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ, ಸಾರ್ವಜನಿಕರ ಕೆಲಸಕಾರ್ಯಗಳನ್ನು ನಿರ್ವಹಣೆ ಮಾಡಲು ಕೊಟ್ಟಿದೆ. ಈಗ ವಾಪಸ್ ಪಡೆಯುವ ಪ್ರಯತ್ನದೊಂದಿಗೆ ರಾಜ್ಯ ಸರ್ಕಾರ ಕೆಟ್ಟ ರಾಜಕಾರಣ ಮಾಡಲು ಹೊರಟಿದೆ ಎಂಬ ಅನುಮಾನ ಮೂಡುತ್ತಿದೆ. ಯಾವುದೇ ಕಾರಣಕ್ಕೂ ಈ ಕಚೇರಿ ಬಿಟ್ಟುಕೊಡುವುದಿಲ್ಲ, ವಾಪಸ್ ಪಡೆಯಬೇಕೆಂಬ ಪ್ರಯತ್ನವನ್ನೂ ರಾಜ್ಯ ಸರ್ಕಾರ ಕೈಬಿಟ್ಟು ಗೌರವಯುತವಾಗಿ ನಡೆದುಕೊಳ್ಳಲಿ ಎಂದು ಹೇಳಿದರು.
ತುಮಕೂರು: ಇನ್ಮುಂದೆ ರಾತ್ರಿ 1 ಗಂಟೆವರೆಗೆ: ದಿನದ 24 ಗಂಟೆ ವ್ಯಾಪಾರ ಮಾಡಬಹುದು! ಸರ್ಕಾರದ ಆದೇಶ
ದಮ್ ಇದ್ದರೆ ವಾಪಸ್ ಪಡೆಯಲಿ:
ತುಮಕೂರು ಗ್ರಾಮಾಂತರ ಶಾಸಕ ಸುರೇಶ್‍ಗೌಡ ಮಾತನಾಡಿ, ಕೇಂದ್ರ ಸಚಿವ ವಿ.ಸೋಮಣ್ಣನವರ ಅಭಿವೃದ್ಧಿ ಕಾರ್ಯ, ಅವರ ಜನಪರ ಕೆಲಸಗಳ ವೇಗಕ್ಕೆ ಕಾಂಗ್ರೆಸ್ ನಾಯಕರಿಗೆ ನಡುಕ ಉಂಟಾಗಿದೆ. ಸೋಮಣ್ಣನವರ ವೇಗ ತಡೆಯಲು ಕಚೇರಿ ಹಿಂಪಡೆಯುವ ಕುತಂತ್ರ ಮಾಡುತ್ತಿದ್ದಾರೆ. ದಮ್ ಇದ್ದರೆ ಕಚೇರಿಯನ್ನು ಹಿಂಪಡೆಯಲಿ ನೋಡೋಣ, ನಾವು ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಮೈಸೂರಿನ ಐಬಿಯಲ್ಲಿ ಮೂವರು ಶಾಸಕರ ಕಚೇರಿಗೆ ಅವಕಾಶ ನೀಡಲಾಗಿದೆ. ಇದು ಸಹಜ ಪ್ರಕ್ರಿಯೆ. ಅದೇರೀತಿ ತುಮಕೂರು ಐಬಿಯಲ್ಲಿ ಕೇಂದ್ರ ಸಚಿವರಿಗೆ ಕಚೇರಿಗೆ ಸ್ಥಳಾವಕಾಶ ಮಾಡಲಾಗಿದೆ. ಆದರೆ ಕಾಂಗ್ರೆಸ್ ನಾಯಕರು ಕೇಂದ್ರ ಸಚಿವರ ಕಚೇರಿ ವಿಚಾರದಲ್ಲಿ ಕೆಟ್ಟ ರಾಜಕಾರಣ ಮಾಡಲು ಹೊರಟಿದ್ದಾರೆ, ಯಾವ ಕಾರಣಕ್ಕೂ ನಾವು ಇದನ್ನು ಸಹಿಸುವುದಿಲ್ಲ, ಕಚೇರಿಯನ್ನೂ ವಾಪಸ್ ನೀಡುವುದಿಲ್ಲ ಎಂದು ಸುರೇಶ್‍ಗೌಡ ಹೇಳಿದರು.
ಗೃಹಲಕ್ಷ್ಮಿ ಯೋಜನೆ: ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ
ಆ.18ರಂದು ಸಚಿವ ವಿ.ಸೋಮಣ್ಣ ಸಾರ್ವಜನಿಕರ ಭೇಟಿ: ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಈ ತಿಂಗಳ 18ರಂದು ನಗರದ ಪ್ರವಾಸಿ ಮಂದಿರದ ತಮ್ಮ ಕಚೇರಿಯಲ್ಲಿ ಸಾರ್ವಜನಿಕರು ಭೇಟಿ ಮಾಡಿ ಕುಂದುಕೊರತೆ, ಅಹವಾಲುಗಳನ್ನು ಸಲ್ಲಿಸಬಹುದು. ಅಂದು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಚಿವ ವಿ.ಸೋಮಣ್ಣ ಕಚೇರಿಯಲ್ಲಿ ಹಾಜರಿರುತ್ತಾರೆ ಎಂದು ಸಚಿವರ ಕಚೇರಿಯ ಪ್ರಕಟಣೆ ತಿಳಿಸಿದೆ.
+ There are no comments
Add yours