ಗಣೇಶೋತ್ಸವ: ನಿಯಮ ಮೀರಿದ್ರೆ ಕಾನೂನು ಕ್ರಮ
ಜಿಲ್ಲೆಯಲ್ಲಿ ಪಿಒಪಿ ಗಣೇಶ ಮೂರ್ತಿ ಮಾರಾಟವಾಗದಂತೆ ಕ್ರಮಕ್ಕೆ ಶುಭ ಕಲ್ಯಾಣ್ ಸೂಚನೆ
Tumkurnews
ತುಮಕೂರು: ಜಿಲ್ಲೆಯಲ್ಲಿ ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆ ಮಾಡುವ ನಿಟ್ಟಿನಲ್ಲಿ ಯಾವುದೇ ರೀತಿಯ ಪಿಒಪಿ( ಪ್ಲಾಸ್ಟರ್ ಆಫ್ ಪ್ಯಾರಿಸ್) ಗಣೇಶ ಮೂರ್ತಿಗಳು ಮಾರಾಟ ಮಾಡದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಶಿವಮೂರ್ತಿ ಅವರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು.
ವಿಧಾನಸೌಧದಿಂದ ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ರಾಜ್ಯದಲ್ಲಿ ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯ ನಂತರ ಸೆಪ್ಟೆಂಬರ್ 7ರಂದು ಆಚರಿಸಲಿರುವ ಗಣೇಶ ಚತುರ್ಥಿಗೆ ಸಂಬಂಧಿಸಿದಂತೆ ಅವರು ಮಾತನಾಡಿದರು.
ಈ ಬಾರಿ ತುಮಕೂರು ದಸರಾ ಹೇಗಿರುತ್ತೆ ಗೊತ್ತೇ? ಜಿಲ್ಲಾಧಿಕಾರಿ ಮಾಹಿತಿ
ಪಿಒಪಿ ಮತ್ತು ರಾಸಾಯನಿಕ ಬಣ್ಣ ಬಳಸಿ ನಿರ್ಮಿಸಿದ ಮೂರ್ತಿಗಳನ್ನು ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದರಿಂದ ಪರಿಸರ ಮಾಲಿನ್ಯ ಉಂಟಾಗಲಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪಿಒಪಿ ಗಣೇಶ ಮೂರ್ತಿಗಳನ್ನು ತಯಾರಿಸದಂತೆ ಕ್ರಮ ಕೈಗೊಳ್ಳಬೇಕು. ನಿಯಮ ಮೀರಿ ಪಿಒಪಿ ಗಣೇಶ ಮೂರ್ತಿಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ತುಮಕೂರು ಅಮಾನಿಕೆರೆ ಕೋಡಿ: ಶಿರಾಗೇಟ್ ರಸ್ತೆ ಬಂದ್
ಜಿಲ್ಲೆಗೆ ಬೇರೆ ರಾಜ್ಯ ಅಥವಾ ಇತರೆ ಜಿಲ್ಲೆಗಳಿಂದ ಪಿಒಪಿ ಗಣೇಶ ಮೂರ್ತಿಗಳ ಸಾಗಾಟ ನಡೆಯದಂತೆ ಜಿಲ್ಲೆಯ ಎಲ್ಲಾ ಗಡಿ ಭಾಗ ಹಾಗೂ ಚೆಕ್ ಪೋಸ್ಟ್’ಗಳಲ್ಲಿ ಪರಿಶೀಲನೆ ನಡೆಸುವಂತೆ ಸೂಚಿಸಿದರು.
ಗಣೇಶ ಚತುರ್ಥಿ ಸಂದರ್ಭದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಯಾವುದೇ ರೀತಿಯ ಧ್ವನಿವರ್ಧಕಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಪೊಲೀಸ್ ಇಲಾಖೆಯಿಂದ ಕಡ್ಡಾಯವಾಗಿ ಪರವಾನಗಿ ಪಡೆಯಬೇಕು ಎಂದು ತಿಳಿಸಿದರು.
ತುಮಕೂರು: ನಗರ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ರೈಲು ನಿಲುಗಡೆ
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಕೆ.ವಿ. ಅಶೋಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಆಂಜಿನಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ. ಕೃಷ್ಣಪ್ಪ, ಮಹಾನಗರಪಾಲಿಕೆ ಕಾರ್ಯಪಾಲಕ ಇಂಜಿನಿಯರ್ ವಿನಯ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
+ There are no comments
Add yours