ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿಗೆ ಅರ್ಜಿ ಆಹ್ವಾನ

1 min read

 

ವಿವಿಧ ಸೌಲಭ್ಯ: ಹಿಂದುಳಿದ ವರ್ಗದವರಿಂದ ಅರ್ಜಿ ಆಹ್ವಾನ

Tumkurnews
ತುಮಕೂರು: ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಪಿ.ಯು.ಸಿ ಮತ್ತು ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ(ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು  ಜಾಲತಾಣ https://ssp.postmatric.karnataka.gov.in ಮೂಲಕ ಸೆಪ್ಟೆಂಬರ್ 15ರೊಳಗಾಗಿ  ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ https://bcwd.karnataka.gov.in, bcwdhelpline@gmail.com, postmatrichelp@karnataka.gov.in ಅಥವಾ ಇಲಾಖಾ ಸಹಾಯವಾಣಿ ಸಂಖ್ಯೆ. 8050770005, ಅಥವಾ ದೂ.ಸಂ.1902ನ್ನು ಸಂಪರ್ಕಿಸಬೇಕೆಂದು ತುಮಕೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours