ಕೆ.ಪಿ.ಎಸ್.ಸಿ ಪರೀಕ್ಷೆ: ತುಮಕೂರಿಗೆ ಆಗಮಿಸುತ್ತಿರುವವರ ಗಮನಕ್ಕೆ!

1 min read

 

ಕೆ.ಪಿ.ಎಸ್.ಸಿ ಪರೀಕ್ಷಾರ್ಥಿಗಳಿಗೆ ಹೆಚ್ಚುವರಿ ಬಸ್ ಸೌಲಭ್ಯ: ಬಸ್ ನಿಲ್ದಾಣದಲ್ಲೇ ಪ್ರವೇಶ ಪತ್ರ ಪ್ರಿಂಟ್ ಲಭ್ಯ

Tumkurnews
ತುಮಕೂರು: ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳಿಗೆ ನಗರದ 16 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸುತ್ತಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ ನಿಗಮದಿಂದ ಅಗತ್ಯ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದ್ದು, ಅದರಂತೆ ಆ.27ರಂದು ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಅಭ್ಯರ್ಥಿಗಳಿಗೆ ನಿಗದಿತ ಸಮಯದಲ್ಲಿ ತಲುಪಲು ಅನುಕೂಲವಾಗುವಂತೆ ಹೆಚ್ಚುವರಿಯಾಗಿ ಸುತ್ತುವಳಿಗಳನ್ನು ಅವಶ್ಯಕತೆಗೆ ತಕ್ಕಂತೆ ಕಾರ್ಯಾಚರಣೆ ಮಾಡುವಂತೆ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್, ಎಲ್ಲಾ ಘಟಕ ವ್ಯವಸ್ಥಾಪಕರಿಗೆ ಸೂಚನೆ ನೀಡಿದ್ದಾರೆ.

ತುಮಕೂರು: ಆ.27ರಂದು ಇಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ: ಡಿಸಿ ಸೂಚನೆ
ತುಮಕೂರು ನಗರದ 16 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಸದರಿ ಪರೀಕ್ಷೆಗೆ 6065 ಅಭ್ಯರ್ಥಿಗಳು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಭ್ಯರ್ಥಿಗಳಿಗೆ ಬಸ್’ಗಳ ಬಗ್ಗೆ ಮಾಹಿತಿ ನೀಡಲು ಪ್ರತ್ಯೇಕ ಮಾಹಿತಿ ಕೇಂದ್ರ ತೆರೆಯಲಾಗಿದೆ. ಅಲ್ಲಲ್ಲಿ ನಿಲ್ದಾಣ ಮೇಲ್ವೀಚಾರಕರ ಮೊಬೈಲ್ ಸಂಖ್ಯೆಯನ್ನು ಅಂಟಿಸಲಾಗಿದೆ.
ಪ್ರವೇಶ ಪತ್ರ ಪ್ರಿಂಟ್ ಲಭ್ಯ: ತುಮಕೂರು ನಗರದ ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ಅಭ್ಯರ್ಥಿಗಳು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲೇ ಪ್ರವೇಶ ಪತ್ರ ಪ್ರಿಂಟ್ ತೆಗೆದುಕೊಳ್ಳಲು ಸೌಲಭ್ಯ ಇದೆ. ತುಮಕೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸ್ಟಾಲ್ ನಂಬರ್ 7ರಲ್ಲಿ ‘ಗಣೇಶ್ ಸ್ಟೋರ್’ನಲ್ಲಿ ಪ್ರವೇಶ ಪತ್ರ ಪ್ರಿಂಟ್, ಜೆರಾಕ್ಸ್, ಸ್ಟೇಷನರಿ ಲಭ್ಯವಿದ್ದು, ಅಭ್ಯರ್ಥಿಗಳು ಸದುಪಯೋಗ ಪಡೆದುಕೊಳ್ಳಬಹುದು.

About The Author

You May Also Like

More From Author

+ There are no comments

Add yours