ಜಿಲ್ಲೆಯಾದ್ಯಂತ ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ವಿಶೇಷ ತಪಾಸಣೆ
Tumkurnews
ತುಮಕೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಗಸ್ಟ್ 31ರಂದು ಜಿಲ್ಲೆಯಾದ್ಯಂತ ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ವಿಶೇಷ ತಪಾಸಣೆ ನಡೆಸಲಾಗುವುದು ಎಂದು ಜಿಲ್ಲಾ ಅಂಕಿತ ಅಧಿಕಾರಿ ಡಾ: ಗಿರೀಶ್ ಪಿ. ತಿಳಿಸಿದ್ದಾರೆ.
ತಪಾಸಣೆ ಸಂದರ್ಭದಲ್ಲಿ ಆಹಾರ ಉದ್ಯಮದಾರರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಗುವುದು. ನೋಂದಣಿ ಮತ್ತು ಪರವಾನಗಿಯನ್ನು ಕಡ್ಡಾಯವಾಗಿ ಪಡೆಯುವಂತೆ ಸೂಚಿಸಲಾಗುವುದು. ಆಹಾರ ಮಾದರಿಯನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಕಳುಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಬಾರಿ ತುಮಕೂರು ದಸರಾ ಹೇಗಿರುತ್ತೆ ಗೊತ್ತೇ? ಜಿಲ್ಲಾಧಿಕಾರಿ ಮಾಹಿತಿ
+ There are no comments
Add yours