ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ
Tumkurnews
ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು, ಸಂಘ ಸಂಸ್ಥೆಗಳು, ಸಾರ್ವಜನಿಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ.
ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಾಗೂ ಪರಿಸರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಪರಿಸರ ಹಾಗೂ ಅಭಿವೃದ್ಧಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಅನುಪಮ ಕೊಡುಗೆ ನೀಡಿರುವ ಹಾಗೂ ಪತ್ರಿಕೋದ್ಯಮದಲ್ಲಿ ಕನಿಷ್ಠ 10 ವರ್ಷಗಳ ಅನುಭವ ಹೊಂದಿರುವ ಅರ್ಹ ಪತ್ರಕರ್ತರನ್ನು ಸಾರ್ವಜನಿಕರು, ಸಂಘ ಸಂಸ್ಥೆಗಳು ನಾಮನಿರ್ದೇಶನ ಮಾಡಬಹುದು ಅಥವಾ ವೈಯುಕ್ತಿಕವಾಗಿ ಸ್ವಯಂ ಅರ್ಜಿ ಸಲ್ಲಿಸಬಹುದು.
ಬೆಂಗಳೂರು ಉಪ ನಗರ ಯೋಜನೆ ಕಾರಿಡಾರ್ 2 ಮತ್ತು ನಾಲ್ಕು 2026ಕ್ಕೆ ಪೂರ್ಣಗೊಳಿಸುವ ಗುರಿ
ಈ ಪ್ರಶಸ್ತಿಯ ಮೊತ್ತ ಒಂದು ಲಕ್ಷ ರೂ. ನಗದು ಪುರಸ್ಕಾರ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಹೊಂದಿದ್ದು, 2017 ರಿಂದ 2023ರ ಅವಧಿಯ ಎರಡೂ ವಿಭಾಗಗಳ ಪ್ರಶಸ್ತಿಗಳಿಗೆ ತಲಾ 7 ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಲಾಗುವುದು.
ಅರ್ಜಿ, ನಾಮನಿರ್ದೇಶನಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾಸೌಧ, ಭಗವಾನ್ ಮಹಾವೀರ ರಸ್ತೆ, (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು 560001 ಇವರಿಗೆ ಅಥವಾ ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅಥವಾ ಇ-ಮೇಲ್ ವಿಳಾಸ tsraward@gmail.com ಗೆ ಸೆಪ್ಟೆಂಬರ್ 30ರೊಳಗಾಗಿ ಸಲ್ಲಿಸಬಹುದು ಎಂದು ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಂಡನ್ ನೆನಪಿಸುವ ತುಮಕೂರಿನ ಹೊಸ ಬಸ್ ನಿಲ್ದಾಣ!: ಜನಾಕರ್ಷಣೆ ಎಸ್ಕಲೇಟರ್! ವಿಡಿಯೋ
+ There are no comments
Add yours