ತುಮಕೂರಿಗೆ 70 ಕೋಟಿ ವೆಚ್ಚದ ಕಾರ್ಡಿಯಾಲಜಿ ಕೇಂದ್ರ, 130 ಕೋಟಿಯ ಆಸ್ಪತ್ರೆ! ಪರಂ

1 min read

 

ತುಮಕೂರಿಗೆ 70 ಕೋಟಿ ರೂ. ವೆಚ್ಚದ ಕಾರ್ಡಿಯಾಲಜಿ ಕೇಂದ್ರ
Tumkurnews
ತುಮಕೂರು: ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಭಾಗವಾಗಿ ಜಿಲ್ಲೆಯಲ್ಲಿ 70 ಕೋಟಿ ರೂ. ವೆಚ್ಚದಲ್ಲಿ ಕಾರ್ಡಿಯಾಲಜಿ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ತಿಳಿಸಿದರು.
ನಗರದ ಎಸ್.ಮಾಲ್ ಬಳಿ ಲೋಕೋಪಯೋಗಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿರ್ಮಿಸಿರುವ ಸೇತುವೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಹೃದ್ರೋಗ ಸಮಸ್ಯೆಯಿದ್ದವರು ತುಮಕೂರು ಜಿಲ್ಲೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತಲುಪಲು ಕನಿಷ್ಟ 2 ತಾಸು ಬೇಕಾಗುತ್ತದೆ. ಇದರಿಂದ ತುರ್ತು ಸಂದರ್ಭಗಳಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ರೋಗಿಗಳು ಸಾವನ್ನಪ್ಪುವ ಸಾಧ್ಯತೆಯಿರುತ್ತದೆ. ಜಿಲ್ಲೆಯಲ್ಲಿ ಕಾರ್ಡಿಯಾಲಜಿ ಕೇಂದ್ರ ನಿರ್ಮಿಸುವುದರಿಂದ ಜಿಲ್ಲೆಯ ಜನರಿಗೆ ಮಾತ್ರವಲ್ಲದೇ ಶಿವಮೊಗ್ಗ, ಹಾಸನ, ಚಿತ್ರದುರ್ಗ ಮುಂತಾದ ಜಿಲ್ಲೆಗಳ ಜನರಿಗೂ ಅನುಕೂಲವಾಗಲಿದೆ ಎಂದರು.

ಶಿರಾಗೇಟ್ ರಸ್ತೆ ಸಂಚಾರಕ್ಕೆ ಮುಕ್ತ: ಸೇತುವೆ ನಿರ್ಮಾಣಕ್ಕೆ ಖರ್ಚಾಗಿದ್ದು ಎಷ್ಟು ಕೋಟಿ ಗೊತ್ತಾ?
ಆಧುನಿಕ ಜಿಲ್ಲಾಸ್ಪತ್ರೆಗೆ 130 ಕೋಟಿ ರೂ.: ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಸ್ಪತ್ರೆಯು ಕಲ್ಲಿನ ಕಟ್ಟಡವಾಗಿದ್ದು, ತುಂಬಾ ಹಳೆಯದಾಗಿದೆ. ಜಿಲ್ಲಾಸ್ಪತ್ರೆಗೆ ಆಧುನಿಕ ರೂಪ ನೀಡಿ ಸುಸಜ್ಜಿತಗೊಳಿಸಲು 130 ಕೋಟಿ ರೂ. ವೆಚ್ಚದ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.

ಲಂಡನ್ ನೆನಪಿಸುವ ತುಮಕೂರಿನ ಹೊಸ ಬಸ್ ನಿಲ್ದಾಣ!: ಜನಾಕರ್ಷಣೆ ಎಸ್ಕಲೇಟರ್! ವಿಡಿಯೋ

About The Author

You May Also Like

More From Author

+ There are no comments

Add yours