ಸೆ.18ರಂದು ಮಿನಿ ಉದ್ಯೋಗ ಮೇಳ
Tumkurnews
ತುಮಕೂರು: ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಸಲುವಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಬೆಲ್‌ಸ್ಟಾರ್ ಮೈಕ್ರೋಫೈನಾನ್ಸ್ ಲಿಮಿಟೆಡ್, ಚೈತನ್ಯ ಇಂಡಿಯಾ ಫಿನ್ ಕ್ರೆಡಿಟ್ ಫೈನಾನ್ಸ್ ಹಾಗೂ ಶ್ರೀರಾಮ್ ಫಾರ್ಚೂನ್ ಸಂಸ್ಥೆಯ ಸಹಭಾಗಿತ್ವದಲ್ಲಿ ಸೆಪ್ಟೆಂಬರ್ 18ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ.
ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ಭಾಗವಹಿಸಬಹುದು.
ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ನಿಗದಿತ ಸಮಯಕ್ಕೆ ನಗರದ ವಾಸನ್ ಕಣ್ಣಿನ ಆಸ್ಪತ್ರೆ ಹತ್ತಿರ ಸೋಮೇಶ್ವರಪುರಂ 14ನೇ ಕ್ರಾಸ್‌ನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೧೬-೨೨೭೮೪೮೮, ೯೦೭೧೦೨೧೧೪೩ / ೯೫೧೩೧೩೬೬೪೫ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ತಿಳಿಸಿದ್ದಾರೆ.
ಮೈಸೂರು ದಸರಾ ಮಾದರಿಯಲ್ಲಿ ತುಮಕೂರು ದಸರಾ
+ There are no comments
Add yours