ಅತಿಥಿ ಗೃಹ ನಿರ್ಮಾಣ ಕಾಮಗಾರಿ: ಸಚಿವರಿಂದ ಶಂಕುಸ್ಥಾಪನೆ
Tumkurnews
ತುಮಕೂರು: ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ನಗರದ ಶ್ರೀ ಸಿದ್ಧಗಂಗಾ ಮಠದ ಆವರಣದಲ್ಲಿರುವ ಯಾತ್ರಿ ನಿವಾಸದ ಪಕ್ಕ ಅತಿಥಿ ಗೃಹ ನಿರ್ಮಾಣಕ್ಕೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವ ಸಾವಿರಾರು ಭಕ್ತಾದಿಗಳು ಹಾಗೂ ಗಣ್ಯ ವ್ಯಕ್ತಿಗಳು ತಂಗಲು ಅನುಕೂಲವಾಗುವಂತೆ ಸುಮಾರು 4.5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಅತಿಥಿ ಗೃಹ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ತುಮಕೂರಿಗೆ 70 ಕೋಟಿ ವೆಚ್ಚದ ಕಾರ್ಡಿಯಾಲಜಿ ಕೇಂದ್ರ, 130 ಕೋಟಿಯ ಆಸ್ಪತ್ರೆ! ಪರಂ
ಶ್ರೀ ಸಿದ್ಧಗಂಗಾ ಮಠದ ಅಧ್ಯಕ್ಷ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ನಗರ ಶಾಸಕ ಜ್ಯೋತಿ ಗಣೇಶ್, ಗ್ರಾಮಾಂತರ ಶಾಸಕ ಸುರೇಶ್‌ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ. ನಾಗಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಶಿರಾಗೇಟ್ ರಸ್ತೆ ಸಂಚಾರಕ್ಕೆ ಮುಕ್ತ: ಸೇತುವೆ ನಿರ್ಮಾಣಕ್ಕೆ ಖರ್ಚಾಗಿದ್ದು ಎಷ್ಟು ಕೋಟಿ ಗೊತ್ತಾ?
+ There are no comments
Add yours