ಗಣೇಶ ಮೂರ್ತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಮೂವರ ಸಾವು
Tumkurnews
ತುಮಕೂರು: ಗಣೇಶ ವಿಸರ್ಜನೆಗೆ ತೆರಳಿದ್ದ ವೇಳೆ ಕೆರೆಯಲ್ಲಿ ಮುಳುಗಿ ತಂದೆ-ಮಗ ಸೇರಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾರಸಂದ್ರ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಮಾರಸಂದ್ರ ಗ್ರಾಮದ ರೇವಣ್ಣ(55), ಪುತ್ರ ಶರತ್(22) ಹಾಗೂ ದಯಾನಂದ್(23) ಮೃತ ದುರ್ದೈವಿಗಳು. ಗ್ರಾಮದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯನ್ನು ಇಂದು ವಿಸರ್ಜನೆ ಮಾಡುವ ಕಾರ್ಯಕ್ರಮವಿತ್ತು. ಗಣೇಶ ಮೂರ್ತಿ ವಿಸರ್ಜನೆ ವೇಳೆ ಈ ಮೂವರು ಕೆರೆಯಲ್ಲಿ ಮುಳುಗಿ ಮೃತರಾಗಿದ್ದಾರೆ.
ಘಟನಾ ಸ್ಥಳಕ್ಕೆ ಎಸ್.ಪಿ ಅಶೋಕ್ ಕೆ.ವಿ ಭೇಟಿ ನೀಡಿ ಪರಿಶೀಲಿಸಿದ್ದು, ದಂಡಿನ ಶಿವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
+ There are no comments
Add yours