ತುಮಕೂರು-ಬೆಂಗಳೂರು ನೂತನ ಮೆಮು ರೈಲು ಸಂಚಾರಕ್ಕೆ ಚಾಲನೆ

1 min read

 

ತುಮಕೂರು-ಬೆಂಗಳೂರು ನೂತನ ಮೆಮು ರೈಲು ಸಂಚಾರಕ್ಕೆ ಸಚಿವ ವಿ. ಸೋಮಣ್ಣ ಚಾಲನೆ

Tumkurnews
ತುಮಕೂರು: ತುಮಕೂರು- ಬೆಂಗಳೂರು ಮಾರ್ಗವಾಗಿ ಸಂಚರಿಸುವ ನೂತನ ಮೆಮು ರೈಲಿಗೆ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಶುಕ್ರವಾರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ನಗರದ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ಜಿಲ್ಲೆಯು ಅತೀವೇಗವಾಗಿ ಬೆಳೆಯುತ್ತಿದ್ದು, ಬೆಂಗಳೂರು ತುಮಕೂರು ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಜಿಲ್ಲೆಯ ಜನರ ಅನುಕೂಲಕ್ಕಾಗಿ ಭಾನುವಾರ ಹೊರತುಪಡಿಸಿ ಪ್ರತಿದಿನ ಬೆಳಿಗ್ಗೆ 8.45ಗಂಟೆಗೆ ತುಮಕೂರಿನಿಂದ ಹೊರಟು 10.25 ಗಂಟೆಗೆ ಯಶವಂತಪುರ ತಲುಪಲಿದೆ ಮತ್ತು ಸಂಜೆ 5.40 ಗಂಟೆಗೆ ಯಶವಂತಪುರದಿಂದ ಹೊರಟು 7.15 ಗಂಟೆಗೆ ತುಮಕೂರು ತಲುಪಲಿದೆ ಎಂದು ತಿಳಿಸಿದರು.

ಎಸ್ಸೆಸ್ಸೆಲ್ಸಿ, ಪದವಿ ಆದವರಿಂದ ಅರ್ಜಿ ಆಹ್ವಾನ: ಕೋರ್ಟ್’ನಲ್ಲಿ ಕೆಲಸ
ತುಮಕೂರು- ಬೆಂಗಳೂರು ಮಾರ್ಗವಾಗಿ ಸಂಚರಿಸುವ ರೈಲುಗಳ ಸಂಖ್ಯೆಯು ಹೆಚ್ಚಾಗಿದ್ದು, 2 ಲೈನ್ ರೈಲ್ವೇ ಹಳಿಯನ್ನು 4 ಲೈನ್ ರೈಲ್ವೇ ಹಳಿಗಳಾಗಿ ಮಾಡಲು ಅನುಮೋದನೆ ನೀಡಲಾಗಿದೆ. ಸುಮಾರು 220 ಕೋಟಿ ರೂ. ವೆಚ್ಚದಲ್ಲಿ ಸ್ವಯಂ ಚಾಲಿತ ಸಿಗ್ನಲ್ ಸ್ಥಾಪಿಸಲಾಗಿದೆ ಮತ್ತು 2026 ಡಿಸೆಂಬರ್ ಅಥವಾ 2027 ಮಾರ್ಚ್ ಅಂತ್ಯದೊಳಗೆ ರಾಯದುರ್ಗ ತುಮಕೂರು ರೈಲ್ವೆ ಯೋಜನೆಯನ್ನು ಪ್ರಧಾನ ಮಂತ್ರಿಯವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ 5 ರೈಲ್ವೆ ಮೇಲ್ಸೇತುವೆ ನಿರ್ಮಾಣ: 350 ಕೋಟಿ ವೆಚ್ಚ: ಸಚಿವ ವಿ.ಸೋಮಣ್ಣ
ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಮಾತನಾಡಿ, ನೂತನವಾಗಿ ಮೆಮೊ ರೈಲು ಸಂಚಾರದಿಂದ ಸಾವಿರಾರು ಪ್ರಯಾಣಿಕರಿಗೆ ಅನುಕೂಲವಾಗಲಿದೆ, ಜಿಲ್ಲೆಯಲ್ಲಿನ ರೈಲ್ವೆ ಕೆಳ ಸೇತುವೆ ಮತ್ತು ಮೇಲ್ಸೆತುವೆ ಕಾಮಗಾರಿಗೆ ಸುಮಾರು 300 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಸುರೇಶ್ ಗೌಡ, ಸುರೇಶ್ ಬಾಬು, ಎಂ.ಟಿ. ಕೃಷ್ಣಪ್ಪ, ಮಾಜಿ ಸಂಸದ ಜಿ.ಎಸ್. ಬಸವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಕೆ.ವಿ. ಅಶೋಕ್, ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಯೋಗೀಶ್ ಮೋಹನ್, ನೈರುತ್ಯ ರೈಲ್ವೆ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಅನುಪ್ ದಯಾನಂದ, ಬೆಂಗಳೂರು ವಿಭಾಗ ಹೆಚ್ಚುವರಿ ವ್ಯವಸ್ಥಾಪಕ ಪರೀಕ್ಷಿತ್ ಮೋಹನ್ ಪೆÇರ್ರ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತಿತರರು ಪಾಲ್ಗೊಂಡಿದ್ದರು.

About The Author

You May Also Like

More From Author

+ There are no comments

Add yours