ತುಮಕೂರು, ಕುಣಿಗಲ್, ಶಿರಾ, ಮಧುಗಿರಿ, ತಿಪಟೂರು, ತುರುವೇಕೆರೆ ಕೋರ್ಟ್’ನಲ್ಲಿ ಉದ್ಯೋಗ: ಅರ್ಜಿ ಆಹ್ವಾನ
ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ
Tumkurnews
ತುಮಕೂರು: ತುಮಕೂರು ಜಿಲ್ಲಾ ಸರ್ಕಾರಿ ವಕೀಲರು ಸೇರಿದಂತೆ ಜಿಲ್ಲೆಯ ಕುಣಿಗಲ್, ಶಿರಾ, ಮಧುಗಿರಿ, ತಿಪಟೂರು, ತುರುವೇಕೆರೆ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವವರು ಕುಣಿಗಲ್, ಶಿರಾ, ಮಧುಗಿರಿ, ತಿಪಟೂರು, ತುರುವೇಕೆರೆ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗಳಿಗೆ 7 ವರ್ಷ ಹಾಗೂ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರಬೇಕು.
ಅರ್ಹ ವಕೀಲರು ತಮ್ಮ ಲಿಖಿತ ಅರ್ಜಿಯೊಂದಿಗೆ ವಕೀಲ ವೃತ್ತಿ ಪೂರೈಸಿರುವ ಬಗ್ಗೆ ದೃಢೀಕರಣ ಪತ್ರ, ವಕೀಲ ವೃತ್ತಿ ನೋಂದಣಿ ದೃಢೀಕರಣ ಪತ್ರ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳ ದೃಢೀಕೃತ ಪ್ರತಿ ಹಾಗೂ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರವನ್ನು ಲಗತ್ತಿಸಿ ನವೆಂಬರ್ 19ರೊಳಗಾಗಿ ಜಿಲ್ಲಾಧಿಕಾರಿಗಳು, ತುಮಕೂರು ಜಿಲ್ಲೆ ಇವರಿಗೆ ಸಲ್ಲಿಸಬೇಕು. ಅವಧಿ ಮೀರಿದ ಹಾಗೂ ಅಗತ್ಯ ದಾಖಲೆಗಳನ್ನು ಲಗತ್ತಿಸಿಲ್ಲದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
+ There are no comments
Add yours