ಜಿಲ್ಲಾ ಪಂಚಾಯತ್ ವ್ಯಾಪ್ತಿಯ 39 ನೌಕರರಿಗೆ ಬಡ್ತಿ
Tumkurnews
ತುಮಕೂರು: ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಕಳೆದ 25 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಬಿಲ್ ಕಲೆಕ್ಟರ್ ಮತ್ತು ಡೇಟಾ ಎಂಟ್ರಿ ಆಪರೇಟರ್’ಗಳಿಗೆ ಜೇಷ್ಠತೆ ಹಾಗೂ ಅರ್ಹತೆ ಆಧಾರದ ಮೇಲೆ ಖಾಲಿ ಇರುವ ಗ್ರೇಡ್-2 ಕಾರ್ಯದರ್ಶಿ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆ ಇಂದು ಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ.
ಕರವಸೂಲಿಗಾರ(ಬಿಲ್ ಕಲೆಕ್ಟರ್) ವೃಂದದಿಂದ ಗ್ರೇಡ್-2 ಕಾರ್ಯದರ್ಶಿ ಹುದ್ದೆಗಳಿಗೆ 13 ಮಂದಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗೆ 8 ಮಂದಿ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ವೃಂದದಿಂದ ಗ್ರೇಡ್ 2 ಕಾರ್ಯದರ್ಶಿ ಹುದ್ದೆಗೆ 9 ಮಂದಿ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ 9 ಮಂದಿ ಸೇರಿದಂತೆ ಒಟ್ಟು 39 ನೌಕರರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಜಿ. ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಡ್ತಿ ನೀಡಲಾಗಿದೆ.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ (ಅಭಿವೃದ್ಧಿ) ಕೆ.ಪಿ. ಸಂಜೀವಪ್ಪ ಮತ್ತು ಸಕ್ಷಮ ಪ್ರಾಧಿಕಾರ ಸಮಿತಿಯ ಸದಸ್ಯರು ಭಾಗಿಯಾಗಿದ್ದರು.
***
ಬಡ್ತಿ ಪಡೆದ ಸಿಬ್ಬಂದಿಗಳಿಗೆ ಪಾರದರ್ಶಕವಾಗಿ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯೂಕ್ತಿಗೊಳಿಸಲಾಗಿದೆ. ಬಡ್ತಿ ನೀಡಬೇಕೆಂದು ನೌಕರರ ಹಲವು ವರ್ಷಗಳ ಬೇಡಿಕೆಯಾಗಿತ್ತು. ಬಡ್ತಿ ಪಡೆದ ನೌಕರರು ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರಭು ಜಿ ತಿಳಿಸಿದ್ದಾರೆ.
+ There are no comments
Add yours