ನ.16ರಂದು ನೇರ ಸಂದರ್ಶನ
Tumkurnews
ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಐ.ಡಿ.ಎಫ್.ಸಿ. ಫಸ್ಟ್ ಭಾರತ್ ಹಾಗೂ ಡಿವೈನ್ ಅಸೋಸಿಯೇಟ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಲುವಾಗಿ ನವೆಂಬರ್ 16ರಂದು ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ., ಐ.ಟಿ.ಐ, ಡಿಪ್ಲೊಮಾ (ಯಾವುದೇ ಟ್ರೇಡ್) ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಆಸಕ್ತ ಅಭ್ಯರ್ಥಿಗಳು ನವೆಂಬರ್ 16ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿ.ಡಿ.ಪಿ.ಐ ಬಸ್ ನಿಲ್ದಾಣ, ವಾಸನ್ ಕಣ್ಣಿನ ಆಸ್ಪತ್ರೆ ಹತ್ತಿರ, ಮೂಲೆಮನೆ ಹೋಟಲ್ ಪಕ್ಕ, ಸೋಮೇಶ್ವರಪುರಂ, 14ನೇ ಕ್ರಾಸ್, ತುಮಕೂರು-572102, ಇಲ್ಲಿ ತಮ್ಮ ಸ್ವಯಂ ವಿವರದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0816-2278488, ಮೊ.ಸಂ. 9071021143, 9513136642ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ.
+ There are no comments
Add yours