ತುಮಕೂರಿನಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಮಾದರಿಯಲ್ಲಿ ಅತ್ಯಾಧುನಿಕ ಕ್ರಿಕೆಟ್ ಸ್ಟೇಡಿಯಂ: ಪರಮೇಶ್ವರ್

1 min read

 

ಕ್ರಿಕೆಟ್ ಸ್ಟೇಡಿಯಂಗೆ 41 ಎಕರೆ: ಪರಮೇಶ್ವರ್

Tumkurnews
ತುಮಕೂರು: ಜಿಲ್ಲೆಯಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಮಾಡಬೇಕೆಂಬ ಒತ್ತಾಯವಿದ್ದು, ಈ ನಿಟ್ಟಿನಲ್ಲಿ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಗೊಲ್ಲಹಳ್ಳಿಯಲ್ಲಿ 41 ಎಕರೆ ಪ್ರದೇಶವನ್ನು ಗುರುತಿಸಿ, ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್‍ಗೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಡಿಸೆಂಬರ್ 2ರಂದು ಅತ್ಯಾಧುನಿಕ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವ ಸಾಧ್ಯತೆ ಇದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಮಾದರಿಯಲ್ಲಿ ಅತ್ಯಾಧುನಿಕ ಕ್ರಿಕೆಟ್ ಸ್ಟೇಡಿಯಂ ಇದಾಗಲಿದೆ ಎಂದು ತಿಳಿಸಿದರು.

ಬಿಪಿಎಲ್ ಕಾರ್ಡ್’ದಾರರಿಗೆ ಶಾಕ್!; ನಿಮ್ಮ ಕಾರ್ಡ್ ಎಷ್ಟು ಸೇಫ್?
ಜನರ ನಂಬಿಕೆಯನ್ನು ಹುಸಿಗೊಳಿಸುವುದಿಲ್ಲ:
ರಾಜ್ಯದ ಜನತೆ ನಮ್ಮ ಸರ್ಕಾರದ ಮೇಲೆ ಇಟ್ಟಿರುವ ನಂಬಿಕೆಯನ್ನು ಹುಸಿಗೊಳಿಸುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಹಲವಾರು ಭರವಸೆಗಳನ್ನು ಈಡೇರಿಸಿದ್ದೇವೆ. ಐದು ವರ್ಷ ಕಳೆಯುವುದರೊಳಗೆ ಎಲ್ಲ ಭರವಸೆಗಳನ್ನು ಹಂತಹಂತವಾಗಿ ಅನುಷ್ಠಾನಗೊಳಿಸುತ್ತೇವೆ ಎಂದು ಹೇಳಿದರು.

ತುಮಕೂರು: ಜಿಲ್ಲೆಯಲ್ಲಿ ಯಾರ್ಯಾರ ಬಿಪಿಎಲ್ ಕಾರ್ಡ್ ರದ್ದಾಗುತ್ತೆ? ಸಚಿವ ಪರಂ ಮಾಹಿತಿ
ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಬೀದಿ ನಾಯಿಗಳ ನಿಯಂತ್ರಣಕ್ಕೆ ಮಹಾನಗರ ಪಾಲಿಕೆ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ನಗರ ವ್ಯಾಪ್ತಿಯಲ್ಲಿ 3000 ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡಲು ಪಾಲಿಕೆ ಮುಂದಾಗಿದ್ದು, ಈಗಾಗಲೇ 700 ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಹಾಗೂ ಆ್ಯಂಟಿ ರೇಬಿಸ್ ವ್ಯಾಕ್ಸಿನೇಷನ್ ಮಾಡಲಾಗಿದೆ ಎಂದು ತಿಳಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಒಂದು ಬಾರಿ ತೀರುವಳಿ (ಒಟಿಎಸ್) ಮೂಲಕ ಆಸ್ತಿ ತೆರಿಗೆ ಬಾಕಿ ಪಾವತಿಸಲು ಅವಕಾಶ ನೀಡಿರುವಂತೆ ಪಾಲಿಕೆಯಲ್ಲಿಯೂ ಅವಕಾಶ ಕಲ್ಪಿಸಬೇಕು ಎಂಬ ಪತ್ರಕರ್ತರ ಮನವಿಗೆ ಸ್ಪಂದಿಸಿದ ಅವರು ಪಾಲಿಕೆ ಆಯುಕ್ತರೊಂದಿಗೆ ಚರ್ಚಿಸಿ ಪಾಲಿಕೆಯಲ್ಲೂ ಸಹ ಒಂದು ಬಾರಿ ತೀರುವಳಿ(ಒಟಿಎಸ್)ಗೆ ಸಮಯ ನಿಗಧಿ ಮಾಡಲಾಗುವುದು ಎಂದು ತಿಳಿಸಿದರು.

ಡಿ.2ರಂದು ತುಮಕೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ: 1500 ಕೋಟಿ ರೂ.ಗಳ ಕೊಡುಗೆ
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ತುಮಕೂರು: ಜಿಲ್ಲಾ ಪಂಚಾಯತ್ ವ್ಯಾಪ್ತಿಯ 39 ನೌಕರರಿಗೆ ಬಡ್ತಿ

About The Author

You May Also Like

More From Author

+ There are no comments

Add yours