ತುಮಕೂರು: ಅನುಕಂಪದ ಉದ್ಯೋಗ: ಅರ್ಧ ಗಂಟೆಯಲ್ಲೇ ಆದೇಶ ಪ್ರತಿ ನೀಡಿದ ಡಿಸಿ!

1 min read

 

ಒಂದೇ ದಿನದಲ್ಲಿ ಉದ್ಯೋಗ ನೀಡಿ ಅನುಕಂಪ ತೋರಿದ ಜಿಲ್ಲಾಧಿಕಾರಿ

Tumkurnews
ತುಮಕೂರು: ಅಪಘಾತದಲ್ಲಿ ನಿಧನರಾದ ಅಗ್ನಿಶಾಮಕ ವಾಹನ ಚಾಲಕನ ಪತ್ನಿಗೆ ಸರ್ಕಾರದಿಂದ ಆದೇಶ ಬಂದ ಕ್ಷಣದಲ್ಲೇ ಅನುಕಂಪದ ಉದ್ಯೋಗ ನೀಡಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾನವೀಯತೆ ಮೆರೆದಿದ್ದಾರೆ.

ತುಮಕೂರು: ಜಿಲ್ಲಾ ಪಂಚಾಯತ್ ವ್ಯಾಪ್ತಿಯ 39 ನೌಕರರಿಗೆ ಬಡ್ತಿ
ತುರುವೇಕೆರೆ ತಾಲೂಕು ಡಿ.ಕಲ್ಕೆರೆಯ ಪರಮೇಶ್ವರ್ ಎಂಬುವರು ಅಗ್ನಿಶಾಮಕ ವಾಹನದ ಚಾಲಕರಾಗಿ ಉದ್ಯೋಗದಲ್ಲಿದ್ದರು. ಕರ್ತವ್ಯ ಮುಗಿಸಿ ಮನೆಗೆ ಬರುವಾಗ 2023ರಲ್ಲಿ ಅಪಘಾತದಲ್ಲಿ ಮೃತರಾಗಿದ್ದರು. ಈ ಪ್ರಕರಣ ಇಲಾಖೆ ಹಂತದಲ್ಲಿ ಇತ್ಯರ್ಥವಾಗಿ ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಮಂಗಳವಾರ ಆದೇಶವಾಗಿತ್ತು. ತಕ್ಷಣ ಜಿಲ್ಲಾಧಿಕಾರಿಗಳು ತಮ್ಮ ಸಿಬ್ಬಂದಿ ಮೂಲಕ ಮೃತ ಪರಮೇಶ್ವರ್ ಅವರ ಪತ್ನಿ ರೋಹಿಣಿ ಅವರನ್ನು ಕಚೇರಿಗೆ ಕರೆದು ಮಾತನಾಡಿಸಿದರು.

ಡಿ.2ರಂದು ತುಮಕೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ: 1500 ಕೋಟಿ ರೂ.ಗಳ ಕೊಡುಗೆ
ಮೂರು ವರ್ಷದ ತಮ್ಮ ಮಗು ಹಾಗೂ ಅತ್ತೆಯೊಂದಿಗೆ ಬಂದಿದ್ದ ರೋಹಿಣಿಯವರನ್ನು ತಮ್ಮ ಕಚೇರಿಯಲ್ಲೇ ಕೂರಿಸಿಕೊಂಡು ಕೇವಲ ಅರ್ಧ ತಾಸಿನಲ್ಲಿ ಅನುಕಂಪದ ಉದ್ಯೋಗದ ನೇಮಕಾತಿ ಆದೇಶವನ್ನು ಸಂತ್ರಸ್ಥ ಮಹಿಳೆಗೆ ನೀಡಿದರು!
ಕುಣಿಗಲ್ ತಾಲೂಕಿನಲ್ಲಿ ಡಿ.ವರ್ಗದ ನೌಕರರಾಗಿ ನೇಮಕಾತಿಗೆ ಆದೇಶಿಸಿ ರೋಹಿಣಿಯವರಿಗೆ ಆದೇಶ ಪತ್ರ ನೀಡಿದರು. ನೇಮಕಾತಿ ಆದೇಶ ಸಿದ್ಧವಾಗುವವರೆಗೆ ಅರ್ಧ ತಾಸು ತಮ್ಮ ಕಚೇರಿಯಲ್ಲಿ ಪಕ್ಕದಲ್ಲೇ ಕುರ್ಚಿಯಲ್ಲಿ ಕೂರಿಸಿಕೊಂಡ ಜಿಲ್ಲಾಧಿಕಾರಿಗಳು ಮಗುವಿಗೆ ಬಿಸ್ಕತ್ತು, ಚಾಕ್ಲೆಟ್, ನೀರು ತರಿಸಿ ಕೊಟ್ಟಿದ್ದು ಅವರ ಅಂತಃಕರಣದ ಭಾವವನ್ನು ತೋರಿತು.

ತುಮಕೂರು: ಜಿಲ್ಲೆಯಲ್ಲಿ ಯಾರ್ಯಾರ ಬಿಪಿಎಲ್ ಕಾರ್ಡ್ ರದ್ದಾಗುತ್ತೆ? ಸಚಿವ ಪರಂ ಮಾಹಿತಿ

About The Author

You May Also Like

More From Author

+ There are no comments

Add yours