ತುಮಕೂರು: ಜಿಲ್ಲೆಯಲ್ಲಿ ಯಾರ್ಯಾರ ಬಿಪಿಎಲ್ ಕಾರ್ಡ್ ರದ್ದಾಗುತ್ತೆ? ಸಚಿವ ಪರಂ ಮಾಹಿತಿ

1 min read

 

ಅರ್ಹರಿಗೆ ಮಾತ್ರ ಬಿಪಿಎಲ್ ಕಾರ್ಡ್

Tumkurnews
ತುಮಕೂರು: ಬಿಪಿಎಲ್ ಕುಟುಂಬದ ಅರ್ಹರಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸಬೇಕೆಂಬ ದೃಷ್ಟಿಯಿಂದ ಅನರ್ಹ ಪಡಿತರ ಚೀಟಿಯನ್ನು ರದ್ದುಪಡಿಸಲು ಸರ್ಕಾರ ಕ್ರಮ ತೆಗೆದುಕೊಂಡಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರು ಬಿಪಿಎಲ್ ಪಡಿತರ ಚೀಟಿಗಳ ಬಗ್ಗೆ ಜನರಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ನೌಕರರು, ನಾಲ್ಕು ಚಕ್ರ ವಾಹನ(ವೈಟ್ ಬೋರ್ಡ್) ಹೊಂದಿರುವವರು ನಿಯಮಾವಳಿಯನ್ವಯ ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹರಿರುವುದಿಲ್ಲ. ರಾಜ್ಯದಲ್ಲಿ ಅಂಕಿ ಅಂಶಗಳ ಪ್ರಕಾರ ಶೇ.80ರಷ್ಟು ಕುಟುಂಬಗಳು ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿವೆ. ಕರ್ನಾಟಕವು ದೇಶದಲ್ಲಿ ತೆರಿಗೆ ಪಾವತಿಸುವಲ್ಲಿ 2ನೇ ಸ್ಥಾನದಲ್ಲಿದ್ದರೂ ಶೇ.80ರಷ್ಟು ಬಿಪಿಎಲ್ ಕುಟುಂಬವಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಡಿ.2ರಂದು ತುಮಕೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ: 1500 ಕೋಟಿ ರೂ.ಗಳ ಕೊಡುಗೆ
ತುಮಕೂರು ಜಿಲ್ಲೆಯಲ್ಲಿ 4547 ಆದಾಯ ತೆರಿಗೆ ಪಾವತಿದಾರರು, 219 ಸರ್ಕಾರಿ ನೌಕರರು, ವಾರ್ಷಿಕ 1.20 ಲಕ್ಷ ರೂ.ಗಳಿಗಿಂತಲೂ ಹೆಚ್ಚು ಕೌಟುಂಬಿಕ ಆದಾಯ ಹೊಂದಿರುವವರು ಸೇರಿ 19 ಸಾವಿರಕ್ಕೂ ಹೆಚ್ಚು ಜನ ಪಡಿತರ ಚೀಟಿಯನ್ನು ಹೊಂದಿದ್ದಾರೆ. ಅನರ್ಹ ಬಿಪಿಎಲ್ ಪಡಿತರ ಚೀಟಿ ಹೊಂದಿದವರನ್ನು ಪತ್ತೆಹಚ್ಚಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬಿಪಿಎಲ್ ಕುಟುಂಬದ ಅರ್ಹರಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸಬೇಕೆಂಬ ದೃಷ್ಟಿಯಿಂದ ಅನರ್ಹ ಪಡಿತರ ಚೀಟಿಯನ್ನು ರದ್ದುಪಡಿಸಲು ಸರ್ಕಾರ ಕ್ರಮ ತೆಗೆದುಕೊಂಡಿದೆ. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕು ಎಂಬ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಸಲುವಾಗಿ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗುತ್ತಿದೆ ಎಂದು ವಿರೋಧಪಕ್ಷದವರು ಆರೋಪ ಮಾಡುತ್ತಿರುವುದು ಸತ್ಯಕ್ಕೆ ದೂರವಾದ ಮಾತು ಎಂದು ಸ್ಪಷ್ಟಪಡಿಸಿದರು.

ತುಮಕೂರು: ಜಿಲ್ಲಾ ಪಂಚಾಯತ್ ವ್ಯಾಪ್ತಿಯ 39 ನೌಕರರಿಗೆ ಬಡ್ತಿ

About The Author

You May Also Like

More From Author

+ There are no comments

Add yours