ತುಮಕೂರು: ನಿಷೇಧಿತ ಕೀಟನಾಶಕ ಮಾರಾಟ: ದಾಸ್ತಾನು ಜಪ್ತಿ

1 min read

 

ನಿಷೇಧಿತ ಕೀಟನಾಶಕ ಮಾರಾಟ: ದಾಸ್ತಾನು ಜಪ್ತಿ

Tumkurnews
ತುಮಕೂರು: ತಾಲ್ಲೂಕಿನ ಹೆಬ್ಬೂರು ಗ್ರಾಮದ ಶ್ರೀ ಲಕ್ಷ್ಮೀವೆಂಕಟೇಶ್ವರ ಆಗ್ರೋಟೆಕ್ ಕೀಟನಾಶಕ ಮಾರಾಟ ಮಳಿಗೆಯಲ್ಲಿ ಮಾರಾಟ ಮಾಡಲಾಗುತ್ತಿದ್ದ ಅಂದಾಜು 7286 ರೂ. ಮೌಲ್ಯದ 10.2 ಲೀಟರ್ ಪ್ರಮಾಣದ ಡೈಮಿಥೋಯೇಟ್-30% ಇ.ಸಿ.(ರೋಗಾರ್) ಎಂಬ ನಿಷೇಧಿತ ಕೀಟನಾಶಕವನ್ನು ಕೃಷಿ ಇಲಾಖೆಯ ಜಾರಿದಳ ವಿಭಾಗವು ಜಪ್ತಿ ಮಾಡಿ ಇಲಾಖೆ ವಶಕ್ಕೆ ಪಡೆಯಲಾಗಿದೆ ಎಂದು ಕೀಟನಾಶಕ ಪರಿವೀಕ್ಷಕ ಹಾಗೂ ಸಹಾಯಕ ಕೃಷಿ ನಿರ್ದೇಶಕ ಪುಟ್ಟರಂಗಪ್ಪ ತಿಳಿಸಿದ್ದಾರೆ.

ತುಮಕೂರಿಗೆ 70 ಕೋಟಿ ವೆಚ್ಚದ ಕಾರ್ಡಿಯಾಲಜಿ ಕೇಂದ್ರ, 130 ಕೋಟಿಯ ಆಸ್ಪತ್ರೆ! ಪರಂ
ತರಕಾರಿ ಮತ್ತು ಹಣ್ಣಿನ ಬೆಳೆಗಳಿಗೆ ಈ ಕೀಟನಾಶಕ ಬಳಸುವುದನ್ನು ನಿಷೇಧ ಮಾಡಿದ್ದರೂ ಸಹ ಲೇಬಲ್‍ನಲ್ಲಿ ನಮೂದಿಸಿ ನ್ಯೂ ಪ್ಯಾಕ್ ಆಗ್ರೋ ಕೆಮ್ ಕಂಪನಿಯು ಡೈಮಿಥೋಯೇಟ್-30% ಇ.ಸಿ., (ರೋಗಾರ್) ಎಂಬ ಕೀಟನಾಶಕವನ್ನು ಉತ್ಪಾದನೆ ಮಾಡಿ ಮಾರಾಟ ಮಾಡುತ್ತಿದ್ದರಿಂದ ಜಪ್ತಿ ಮಾಡಲಾಗಿದೆ.
ಕೃಷಿ ಇಲಾಖೆಯ ಜಾರಿದಳ ವಿಭಾಗವು ನವೆಂಬರ್ 19ರಂದು ಶ್ರೀ ಲಕ್ಷ್ಮೀವೆಂಕಟೇಶ್ವರ ಆಗ್ರೋಟೆಕ್ ಕೀಟನಾಶಕ ಮಾರಾಟ ಮಳಿಗೆ ಮೇಲೆ ದಾಳಿ ಮಾಡಿ ನಿಯಮಾನುಸಾರ ಪರಿಶೀಲಿಸಿದಾಗ, ಮೇಲ್ಕಂಡ ಉಲ್ಲಂಘನೆ ಕಂಡು ಬಂದಿತ್ತು. ಕಳೆದ ಬಾರಿ ಕ್ಷೇತ್ರ ಭೇಟಿ ಸಂದರ್ಭದಲ್ಲಿ ನಿಷೇಧಿತ ಕೀಟನಾಶಕ ದಾಸ್ತಾನಿಗೆ ಮಾರಾಟ ತಡೆ ಆದೇಶ ಜಾರಿಗೊಳಿಸಿ ಸಂಬಂಧಿಸಿದ ಮಾರಾಟಗಾರರು, ಸರಬರಾಜುದಾರರು, ವಿತರಕರು ಮತ್ತು ಉತ್ಪಾದಕರಿಗೆ ನೋಟೀಸ್ ಜಾರಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಸಮಜಾಯಿಷಿ ನೀಡಲು ಕ್ರಮ ಕೈಗೊಳ್ಳಲಾಗಿತ್ತು, ಆದರೆ ಉತ್ಪಾದಕ ಕಂಪನಿಯು ಸೂಕ್ತ ದಾಖಲೆಗಳನ್ನು ಸಲ್ಲಿಸದೇ ಇರುವ ಕಾರಣ ಕೀಟನಾಶಕ ಕಾಯ್ದೆ 1968 ಮತ್ತು ಕೀಟನಾಶಕ ನಿಯಮಗಳು 1971ರ ಉಲ್ಲಂಘನೆ ಮೇರೆಗೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಸದರಿ ಕೀಟನಾಶಕದ ಮಾದರಿಯನ್ನು ತೆಗೆದು ಗುಣ ನಿಯಂತ್ರಣ ವಿಶ್ಲೇಷಣೆಗೆ ಕಳುಹಿಸಿಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತುಮಕೂರು: ಅನುಕಂಪದ ಉದ್ಯೋಗ: ಅರ್ಧ ಗಂಟೆಯಲ್ಲೇ ಆದೇಶ ಪ್ರತಿ ನೀಡಿದ ಡಿಸಿ!

About The Author

You May Also Like

More From Author

+ There are no comments

Add yours