ಹಾಸನ, ತಿಪಟೂರು, ಹುಳಿಯಾರು, ಗ್ರೀನ್ ಫೀಲ್ಡ್ ಕಾರಿಡಾರ್ ನಿರ್ಮಾಣ: 4500 ಕೋಟಿ ರೂ. ವೆಚ್ಚ

1 min read

 

ಹಾಸನ, ತಿಪಟೂರು, ಹುಳಿಯಾರು, ಗ್ರೀನ್ ಫೀಲ್ಡ್ ಕಾರಿಡಾರ್ ನಿರ್ಮಾಣವಾಗಲಿದೆ

ರಾಜ್ಯದಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆ

Tumkur news
ತುಮಕೂರು: ಉತ್ತರ ಭಾರತದ ಬೇರೆ ಬೇರೆ ರಾಜ್ಯಗಳಲ್ಲಿ ಇರುವಂತೆ ಕರ್ನಾಟಕದಲ್ಲೂ 4500 ಕೋಟಿ ರೂ. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆಯನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದರು.

ಜೆ.ಪಿ ನಡ್ಡಾರನ್ನು ಭೇಟಿ ಮಾಡಿದ ವಿ‌.ಸೋಮಣ್ಣ
ನಗರದ ಪ್ರವಾಸಿ ಮಂದಿರದಲ್ಲಿರುವ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಭವಿಷ್ಯದಲ್ಲಿ ಗ್ರೀನ್ ಫೀಲ್ಡ್ ಕರ್ನಾಟಕದ ದೊಡ್ಡ ಯೋಜನೆಯಾಗಲಿದೆ ಎಂದು ಹೇಳಿದರು.
ಹಾಸನ, ತಿಪಟೂರು, ಹುಳಿಯಾರು, ಗ್ರೀನ್ ಫೀಲ್ಡ್ ಕಾರಿಡಾರ್ ನಿರ್ಮಾಣವಾಗಲಿದೆ. ತುಮಕೂರು ಜಿಲ್ಲೆಯಲ್ಲಿ 40 ಕಿ.ಮೀ.ನಲ್ಲಿ ಹಾದು ಹೋಗಲಿದೆ. 500 ಕೋಟಿ ರೂ. ವೆಚ್ಚದಲ್ಲಿ ಪುಣೆ-ಬೆಂಗಳೂರು 500 ಕಿ.ಮೀ. ವ್ಯಾಪ್ತಿಯಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಆಗಲಿದೆ ಎಂದರು.
ತುಮಕೂರು ಲೋಕಸಭಾ ಕ್ಷೇತ್ರದ ಪ್ರತಿ ಹೋಬಳಿಗೆ ಹೋಗಿ ಜನರ ಸಮಸ್ಯೆಗಳನ್ನು ಆಲಿಸುತ್ತೇನೆ. ಒಂದು ದಿನಕ್ಕೆ ಎರಡು ಹೋಬಳಿಯಂತೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ ಎಂದು ಅವರು ಹೇಳಿದರು.
ಒಂದು ವಾರದಲ್ಲಿ ಮೂರು ದಿನ ಒಂದು ರೌಂಡ್ ಮಗಿಸಿ, ಎರಡನೇ ರೌಂಡ್‍ಗೆ ಬೇರೆ ಬೇರೆ ಪಂಚಾಯ್ತಿಗಳಿಗೆ ಹೋಗುತ್ತೇನೆ. ಆ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಣವನ್ನು ಹೇಗೆ ವಿನಿಯೋಗಿಸಲಾಗಿದೆ ಎಂಬುದನ್ನು ಸಹ ಪರಿಶೀಲನೆ ನಡೆಸುತ್ತೇನೆ ಎಂದರು.
ರಾಜ್ಯದಲ್ಲಿ ಒಟ್ಟು 5072 ಕೋಟಿ ರೂ. ರೈಲ್ವೆ ಯೋಜನೆಗೆ ಅನುದಾನ ತಂದಿದ್ದೇನೆ. ಈಗಾಗಲೇ 17 ಜಿಲ್ಲೆಗಳಲ್ಲೂ ಪ್ರವಾಸ ಮಾಡಿದ್ದು, ಅಲ್ಲಿ ಆಗಬೇಕಾಗಿರುವ ರೈಲ್ವೆ ಯೋಜನೆಗಳ ಕುರಿತು ಕ್ರಮ ಕೈಗೊಳ್ಳಲಾಗಿದೆ ಎಂದರು.
ತುಮಕೂರು-ರಾಮದುರ್ಗ ಮಾರ್ಗದಲ್ಲಿ 2500 ಕೋಟಿ ವೆಚ್ಚದಲ್ಲಿ 2ನೇ ಹಂತದ ಕೆಲಸಗಳು ಆರಂಭವಾಗಿವೆ. ಶೇ. 90 ರಷ್ಟು ಭೂ ಹಸ್ತಾಂತರ ಕಾರ್ಯ ಮುಗಿದಿದೆ. 2027ರ ಡಿಸೆಂಬರ್‍ಗೆ ಈ ಯೋಜನೆ ಲೋಕಾರ್ಪಣೆಗೊಳ್ಳಲಿದೆ ಎಂದು ಅವರು ತಿಳಿಸಿದರು. ಶಾಸಕರಾದ ಬಿ.ಸುರೇಶ್‍ಗೌಡ, ಜಿ.ಬಿ ಜ್ಯೋತಿಗಣೇಶ್, ಮಾಜಿ ಸಂಸದ ಜಿ.ಎಸ್. ಬಸವರಾಜು, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಮತ್ತಿತರರು ಉಪಸ್ಥಿತರಿದ್ದರು.

 

About The Author

You May Also Like

More From Author

+ There are no comments

Add yours