ಸಿ.ಟಿ ರವಿ ಪ್ರಕರಣ: ನಾಗರಿಕ ಸಮಾಜಕ್ಕೆ ಶೋಭೆಯಲ್ಲ: ವಿ.ಸೋಮಣ್ಣ ಹೇಳಿದ್ದೇನು?

1 min read

 

ಸಿ.ಟಿ ರವಿ ಪ್ರಕರಣ: ನಾಗರಿಕ ಸಮಾಜಕ್ಕೆ ಶೋಭೆಯಲ್ಲ

Tumkur news
ತುಮಕೂರು: ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಬುದ್ಧಿವಂತ ರಾಜಕಾರಣಿ. ಅವರು ಆ ರೀತಿ ಮಾತನಾಡಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಭಾಪತಿಗಳು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ಸಿ.ಟಿ ರವಿ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ. ರವಿ ಸದನದಲ್ಲಿ ಏನು ಮಾತನಾಡಿದ್ದಾರೆ, ಏನು ಮಾತನಾಡಿಲ್ಲ ಎನ್ನುವುದರ ಬಗ್ಗೆ ತೀರ್ಮಾನ ಮಾಡುವವರು ಪರಿಷತ್ ಸಭಾಪತಿಗಳು. ವಿಧಾನ ಪರಿಷತ್‍ನಲ್ಲಿ ಸಭಾಪತಿಗಳು ಎಷ್ಟು ಕಸ್ಟಡಿಯನ್ನೋ ಅದೇ ರೀತಿ ಲೋಕಸಭೆಯಲ್ಲಿ ನಮ್ಮ ಸ್ಪೀಕರ್ ಸಹ ಅಷ್ಟೇ ಕಸ್ಟೋಡಿಯನ್. ಹಾಗಾಗಿ ಸಭಾಪತಿಗಳೇ ತೀರ್ಮಾನ ಮಾಡುತ್ತಾರೆ ಎಂದರು.

ರಾಜ್ಯದಲ್ಲಿ 5 ರೈಲ್ವೆ ಮೇಲ್ಸೇತುವೆ ನಿರ್ಮಾಣ: 350 ಕೋಟಿ ವೆಚ್ಚ: ಸಚಿವ ವಿ.ಸೋಮಣ್ಣ
ಸಿ.ಟಿ. ರವಿ ಅವರು ಏನು ಮಾತನಾಡಿದ್ದಾರೆ ಎಂಬುದು ನನಗೆ ಸರಿಯಾಗಿ ಗೊತ್ತಿಲ್ಲ. ಪತ್ರಿಕೆಗಳಲ್ಲಿ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂಬುದನ್ನು ಓದಿದ್ದೇನೆ. ಆದರೆ ರವಿ ಅವರನ್ನು ಇಡೀ ರಾತ್ರಿ ಪೊಲೀಸರು ಜೀಪಿನಲ್ಲಿ ಕೂರಿಸಿಕೊಂಡು ಸುತ್ತಾಡಿಸಿ ಮಾನಸಿಕ ಹಿಂಸೆ ನೀಡಿರುವುದು ಯಾವುದೇ ನಾಗರಿಕ ಸರ್ಕಾರಕ್ಕೆ ಗೌರವ ತರುವುದಿಲ್ಲ ಎಂದರು.

About The Author

You May Also Like

More From Author

+ There are no comments

Add yours