ತುಮಕೂರು: ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಕಾರ್ಮಿಕರ ದುರ್ಮರಣ

1 min read

 

ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಕಾರ್ಮಿಕರ ದುರ್ಮರಣ

Tumkur news
ತುಮಕೂರು: ಆಯಿಲ್‌ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟು, ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಅಂತಸರನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.
ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ
ಅಂತಸರಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಪರಿಮಳ ಆಗ್ರೋ ಫುಡ್ ಇಂಡಸ್ಟ್ರೀಸ್‌ ಕಾರ್ಖಾನೆಯಲ್ಲಿ ಆಯಿಲ್ ಟ್ಯಾಂಕ್ ಸ್ಫೋಟಗೊಂಡಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ವೇಳೆ ಆಯಿಲ್ ಟ್ಯಾಂಕ್ ಬಳಿ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಬದುಕುಳಿದ ಮೂವರು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳು ಕಾರ್ಮಿಕರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಕಾರ್ಮಿಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

You May Also Like

More From Author

+ There are no comments

Add yours