ಮೈಕ್ರೋಫೈನಾನ್ಸ್ ಹಾವಳಿ: ಇಂದು ಜಿಲ್ಲಾಧಿಕಾರಿ ಮಹತ್ವದ ಸಭೆ
Tumkur news
ತುಮಕೂರು: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಂಪನಿಗಳ ವ್ಯವಹಾರಗಳಿಂದಾಗಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳು ಹಾಗೂ ಸಾರ್ವಜನಿಕರಿಂದ ಬರುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಜನವರಿ 29ರಂದು ಬೆಳಿಗ್ಗೆ 8.30 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸಭೆ ನಿಗಧಿಪಡಿಸಲಾಗಿದೆ.
ಜಿಲ್ಲೆಯಲ್ಲಿನ ಮೈಕ್ರೋ ಫೈನಾನ್ಸ್ ಕಂಪನಿಗಳ ವ್ಯವಸ್ಥಾಪಕರುಗಳು ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಹಾಜರಾಗುವಂತೆ ಸಹಕಾರ ಸಂಘಗಳ ಉಪನಿಬಂಧಕ ಹೆಚ್. ಮೂರ್ತಿ ಸೂಚಿಸಿದ್ದಾರೆ.
+ There are no comments
Add yours