ತುಮಕೂರು: ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಸರ್ಕಾರ ನಡೆದುಕೊಳ್ಳುತ್ತಿಲ್ಲ: ಪ್ರತಿಭಟನೆ

1 min read

 

ತುಮಕೂರು: ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಸರ್ಕಾರ ನಡೆದುಕೊಳ್ಳುತ್ತಿಲ್ಲ: ಪ್ರತಿಭಟನೆ

Tumkur news
ತುಮಕೂರು: ಪರಿಶಿಷ್ಟ ಜಾತಿಯಲ್ಲಿನ ಒಳಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರಿಂಕೋರ್ಟಿನ ಆದೇಶದಂತೆ ಕೂಡಲೇ ಒಳಮೀಸಲಾತಿ ಜಾರಿಗೆ ಸರಕಾರ ಮುಂದಾಗಬೇಕು. ನ್ಯಾ.ಸದಾಶಿವ ಆಯೋಗದ ಶಿಫಾರಸ್ಸುನ್ನು ಯಾಥಾವತ್ತು ಜಾರಿಗೆ ತರಲು ನ್ಯಾ.ನಾಗಮೋಹನ್ ದಾಸ್ ಸಮಿತಿಗೆ ಶಿಫಾರಸ್ಸು ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಮಾದಿಗ ಸಮುದಾಯಗಳ ಸ್ವಾಭಿಮಾನಿ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತುಮಕೂರು: ಮೈಕ್ರೋ ಫೈನಾನ್ಸ್ ಕಿರುಕುಳ: ವ್ಯಕ್ತಿ ಸಾವು
ಪ್ರತಿಭಟನಾ ನಿರತ ಒಕ್ಕೂಟದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಬಿ.ಎಸ್.ಪಿ ರಾಜ್ಯ ಉಪಾಧ್ಯಕ್ಷ ಹಾಗೂ ಒಕ್ಕೂಟದ ರಾಜ್ಯ ಸಂಚಾಲಕ ಗುರುಮೂರ್ತಿ, ಸುಪ್ರಿಂಕೋರ್ಟಿನ ಆದೇಶದಂತೆ ಒಳಮೀಸಲಾತಿಯನ್ನು ನಿಗಧಿತ ಅವಧಿಯೊಳಗೆ ಜಾರಿ ಮಾಡಬೇಕು. ನ್ಯಾ.ಸದಾಶಿವ ಆಯೋಗದ ವರದಿಯನ್ನು ಪರಿಗಣಿಸಿ, ಹೆಚ್ಚಳವಾಗಿರುವ ಶೇ.2ರ ಮೀಸಲಾತಿಯನ್ನು ಒಳಗೊಂಡಂತೆ ಶೇ.17ರ ಮೀಸಲಾತಿಯನ್ನು 101 ಜಾತಿಗೆ ಅನುಗುಣವಾಗಿ ಎಬಿಸಿಡಿ ವರ್ಗಿಕರಣ ಮಾಡಿ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.
ಸರಕಾರ ಕೊಟ್ಟ ಮಾತಿನಂತೆ ಒಳಮೀಸಲಾತಿ ಜಾರಿಯಾಗುವವರೆಗೂ ಯಾವುದೇ ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬಬಾರದು. ಹಾಗೆಯೇ ಅಲೆಮಾರಿ ಪಟ್ಟಿಯಲ್ಲಿರುವ 49 ಸಮುದಾಯಗಳಿಗೆ ಶೇ.1 ಮೀಸಲಾತಿಯನ್ನು ಹಂಚಿಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಅನಗತ್ಯ ವಿಳಂಬ ಮಾಡದ ನಿಗದಿತ ಅವಧಿಯೊಳಗೆ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ತುಮಕೂರು: ಕಾನೂನು ಸೇವೆಗಳ ಬಗ್ಗೆ ದಲಿತ ಕಾಲೋನಿಗಳಲ್ಲಿ ಅರಿವು ಮೂಡಿಸಬೇಕು: ಜಿಲ್ಲಾಧಿಕಾರಿ
ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಮಾತನಾಡಿ, ಒಳಮೀಸಲಾತಿಗಾಗಿ ಸುಮಾರು 3 ದಶಕಗಳ ಹೋರಾಟವನ್ನು ಇದುವರೆಗೂ ಆಳ್ವಿಕೆ ಮಾಡಿದ ಎಲ್ಲಾ ರಾಜಕೀಯ ಪಕ್ಷಗಳು ಕಡೆಗಣಿಸಿವೆ. ಸುಪ್ರಿಂಕೋರ್ಟಿನ ಆದೇಶದ ನಂತರವೂ ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಸರಕಾರ ನಡೆದುಕೊಳ್ಳುತ್ತಿಲ್ಲ. 2006ರಲ್ಲಿ ನೇಮಕವಾಗಿ ನ್ಯಾ.ಎ.ಜೆ.ಸದಾಶಿವ ಆಯೋಗವು ಸುಮಾರು 7 ವರ್ಷಗಳ ಕಾಲ ಪ್ರತಿ ಮನೆ ಮನೆಗೆ ತೆರಳಿ ಮಾಹಿತಿ ಕಲೆಹಾಕಿದ್ದು, ಸದರಿ ಅಂಕಿ ಅಂಶಗಳನ್ನೇ ಬಳಸಿಕೊಳ್ಳಲು ಸರಕಾರ ನ್ಯಾ.ನಾಗಮೋಹನ್ ದಾಸ್ ಸಮಿತಿ ಶಿಫಾರಸ್ಸು ಮಾಡಬೇಕು. ಅನಗತ್ಯ ವಿಳಂಬ ತಡೆದು, ನಿಗದಿತ ಅವಧಿಯೊಳಗೆ ಮೀಸಲಾತಿ ಜಾರಿ ಮಾಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ಸಂಬಂಧ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಅಂಬೇಡ್ಕರ್ ದಂಡು ಸಂಘಟನೆಯ ಜಿಲ್ಲಾಧ್ಯಕ್ಷ ಕುಮಾರ್, ಮುಖಂಡರಾದ ಗಂಗಣ್ಣ, ವೀರಕ್ಯಾತಯ್ಯ, ಜಿ.ಟಿ.ಯುವರಾಜು, ಎನ್.ಕೇಶವ್, ತಿಪ್ಪೇಸ್ವಾಮಿ, ಭರತ್ ಬೆಲ್ಲದಮಡು, ಗಿರೀಶ್, ಕೃಷ್ಣಮೂರ್ತಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ದ್ವಿಚಕ್ರ ವಾಹನದಲ್ಲಿ 4 ಜನ ರೈಡ್! ಪೊಲೀಸರಿಗೆ ಅವಾಜ್; ನಾಲ್ವರು ಪುಂಡರ ಬಂಧನ

About The Author

You May Also Like

More From Author

+ There are no comments

Add yours