ತುಮಕೂರು ಜಿಲ್ಲೆಯಲ್ಲಿ ರಾಜ್ಯದಲೇ ಅತಿ ಹೆಚ್ಚು ಮೈಕ್ರೋ ಫೈನಾನ್ಸ್ ಸಾಲ!
Tumkur news
ತುಮಕೂರು: ವಿವಿಧ ಮೈಕ್ರೋ ಫೈನಾನ್ಸ್ ಕಂಪನಿಗಳು ಜಿಲ್ಲೆಯಲ್ಲಿ 64 ಕೋಟಿ ರೂ.ಗಳ ಸಾಲವನ್ನು ನೀಡಿದೆ. ಮೈಕ್ರೋ ಫೈನಾನ್ಸ್ ಕಂಪನಿಗಳು ಹೆಚ್ಚು ಸಾಲ ನೀಡಿಕೆಯಲ್ಲಿ ಜಿಲ್ಲೆಯು 2ನೇ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ತುತ್ತಾಗಿರುವ ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕುರಂಕೋಟೆ, ಕೋಳಾಲ ಮತ್ತಿತರ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಮುಂದಾಲೋಚನೆಯಿಲ್ಲದೆ ಯಾರೂ ಸಾಲ ಮಾಡಬಾರದು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಸ್ವ-ಸಹಾಯ ಗುಂಪಿನಿಂದ ಸಾಲ ಪಡೆದು ಆರ್ಥಿಕ ಅಭಿವೃದ್ಧಿ ಹೊಂದುವ ಬಗ್ಗೆ ಜನರಿಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಜನರು ತಮ್ಮ ಅವಶ್ಯಕತೆ ಇತಿ-ಮಿತಿಯೊಳಗಿರುವಂತೆ ಎಚ್ಚರವಹಿಸಬೇಕು. ಮೈಕ್ರೋ ಫೈನಾನ್ಸ್ ನಿಂದ ತಾವು ಸಾಲ ಪಡೆಯುವುದಲ್ಲದೆ ಸ್ನೇಹಿತರು, ಬಂಧುಗಳ ಹೆಸರಲ್ಲಿಯೂ ತೆಗೆದುಕೊಳ್ಳುತ್ತಿರುವುದು ಪರಿಶೀಲನೆ ವೇಳೆಯಲ್ಲಿ ಗಮನಕ್ಕೆ ಬಂದಿದೆ. ಸ್ನೇಹಿತರ ಸಾಲಕ್ಕೆ ಜಾಮೀನು ಹಾಕುವ ಮುನ್ನ ಯೋಚಿಸಬೇಕು. ಇದರಿಂದ ಸಾಲ ಪಡೆದವರು ಹಾಗೂ ಜಾಮೀನು ಹಾಕಿದವರೂ ಸಹ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ತಿಳಿ ಹೇಳಿದರು.
ಮೈಕ್ರೋಫೈನಾನ್ಸ್ ಹಾವಳಿ: ಇಂದು ಜಿಲ್ಲಾಧಿಕಾರಿ ಮಹತ್ವದ ಸಭೆ
ಗ್ರಾಮೀಣ ಪ್ರದೇಶದಲ್ಲಿ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಸರ್ಕಾರದ ವಿವಿಧ ಯೋಜನೆಗಳಡಿ ಅತಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಲು ಅವಕಾಶವಿದ್ದು, ಮಹಿಳೆಯರು ಈ ಸೌಲಭ್ಯವನ್ನು ಪಡೆದು ಆರ್ಥಿಕವಾಗಿ ಸಬಲರಾಗಲು ಸಾಧ್ಯವಿದೆ. ಇದರಿಂದ ಸಾಲದ ಶೂಲಕ್ಕೆ ಸಿಲುಕುವುದು ತಪ್ಪುತ್ತದೆ ಎಂದು ತಿಳಿಸಿದರು.
ಪ್ರಕರಣ ದಾಖಲಿಸಲು ಸೂಚನೆ: ಆರ್.ಬಿ.ಐ ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಕ್ರಮಕೈಗೊಳ್ಳಲಾಗುವುದು. ಬುಧವಾರ ಮೈಕ್ರೋ ಫೈನಾನ್ಸ್ ಕಂಪನಿಗಳೊಂದಿಗೆ ಸಭೆ ನಡೆಸಿ ಕಂಪನಿಯ ಲಾಭಕ್ಕಾಗಿ ಸಾಲ ಮರುಪಾವತಿ ಮಾಡಲು ಸಾಧ್ಯವಿರದ ಮುಗ್ಧರಿಗೆ ಸಾಲ ನೀಡಬಾರದು ಎಂದು ಸೂಚಿಸಿದ್ದು, ಜಿಲ್ಲೆಯಲ್ಲಿ ಸಾಲ ನೀಡಲು ಅನುಸರಿಸಬೇಕಾದ ನಿಯಮಗಳ ಬಗ್ಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಈ ಸಂದರ್ಭದಲ್ಲಿ ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಕೊರಟಗೆರೆ ತಹಶೀಲ್ದಾರ್ ಮಂಜುನಾಥ್, ಸೇರಿದಂತೆ ಮತ್ತಿತರರು ಹಾಜರಿದ್ದರು.
+ There are no comments
Add yours