ಸದ್ಯದಲ್ಲೇ ಶಿಕ್ಷಣ ಇಲಾಖೆಯಲ್ಲಿ 15 ಸಾವಿರ ಹುದ್ದೆಗಳ ನೇಮಕ: ಸಚಿವ

1 min read

 

ರಾಜ್ಯದಲ್ಲಿ ಮತ್ತೆ 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ: ಸಚಿವ ಮಧುಬಂಗಾರಪ್ಪ

Tumkur news
ತುಮಕೂರು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದೆ. ಹೊಸದಾಗಿ 15000 ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎನ್. ಮಧು ಬಂಗಾರಪ್ಪ ತಿಳಿಸಿದರು.

ತುಮಕೂರು ಜಿಲ್ಲೆಯಲ್ಲಿ ರಾಜ್ಯದಲೇ ಅತಿ ಹೆಚ್ಚು ಮೈಕ್ರೋ ಫೈನಾನ್ಸ್ ಸಾಲ!
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿಕ್ಷಕರ ಕೊರತೆ ನೀಗಿಸಲು ಹೊಸದಾಗಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಿಸಲು ಹಲವಾರು ವಿನೂತನ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ. ಶಾಲೆಗಳಲ್ಲಿದ್ದ ನ್ಯೂನ್ಯತೆಗಳನ್ನು ಸರಿಪಡಿಸಲಾಗಿದೆ. ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಜ್ಞಾನ ಲ್ಯಾಬ್‍ಗಳನ್ನು ಮಂಜೂರು ಮಾಡಲಾಗಿದೆ ಎಂದರು.

ತುಮಕೂರು: ಸಮಾಜಕ್ಕೆ ಧರ್ಮರಾಯನ ಸತ್ಯ ಮತ್ತು ದುರ್ಯೋಧನನ ಸ್ನೇಹಪರ ವ್ಯಕ್ತಿತ್ವ ಎರಡು ಮುಖ್ಯ: ಡಾ.ಕೆ.ನಾಗಣ್ಣ
ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಇದರಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತದೆ. ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಮಧ್ಯಾಹ್ನದ ಬಿಸಿಯೂಟ, ಉಚಿತ ಸಮವಸ್ತ್ರ, ಪುಸ್ತಕ, ಶೂ, ಮತ್ತಿತರ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಈಗಿರುವ ಶಾಲೆಗಳನ್ನು ಕೆಪಿಎನ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಇದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಆಸಕ್ತಿ ತೋರುತ್ತಿದ್ದಾರೆ ಎಂದು ಹೇಳಿದರು.
ಪ್ರಸಕ್ತ ವರ್ಷದಲ್ಲಿ ಪದವಿಪೂರ್ವ ಕಾಲೇಜುಗಳನ್ನೂ ಸಹ ಮೇಲ್ದರ್ಜೆಗೇರಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಪದವಿಪೂರ್ವ ಕಾಲೇಜುಗಳಿಗೂ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕ್ರಮವಹಿಸಲಾಗುವುದು.

ನಿಮ್ಮ ಮಕ್ಕಳು ವೇಗವಾಗಿ, ಚುರುಕಾಗಿ ಲೆಕ್ಕಹಾಕಬೇಕೇ? ಗಣಿತದಲ್ಲಿ ಪಾರಿಣ್ಯತೇ ಹೊಂದಬೇಕೆ? ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿವಿರೇ? ಇಲ್ಲಿದೆ ಸುವರ್ಣವಕಾಶ!

About The Author

You May Also Like

More From Author

+ There are no comments

Add yours