ತುಮಕೂರು: ರೈಲ್ವೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ವಿ.ಸೋಮಣ್ಣ

1 min read

 

ತುಮಕೂರು: ರೈಲ್ವೇ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಸಚಿವ ವಿ.ಸೋಮಣ್ಣ

Tumkur news
ತುಮಕೂರು: ಜಿಲ್ಲೆಯಲ್ಲಿ ಕೈಗೊಂಡಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಹೊಸದಾಗಿ ಮಂಜೂರಾದ ರೈಲ್ವೆ ಯೋಜನೆಗಳನ್ನು ಮಾರ್ಚ್ 25ರೊಳಗಾಗಿ ಕೈಗೆತ್ತಿಕೊಳ್ಳಬೇಕು ಎಂದರು.

ತುಮಕೂರು ಜಿಲ್ಲೆಯಲ್ಲಿ ರಾಜ್ಯದಲೇ ಅತಿ ಹೆಚ್ಚು ಮೈಕ್ರೋ ಫೈನಾನ್ಸ್ ಸಾಲ!
ಜಿಲ್ಲೆಯಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ಡಿ.ರಾಮಪುರ ಗೇಟ್, ಬಡ್ಡಿಹಳ್ಳಿ ಗೇಟ್, ದೊಡ್ಡನಕೆರೆ ಸೇರಿ ಮತ್ತಿತರ ರೋಡ್ ಅಂಡರ್ ಬ್ರಿಡ್ಜ್ ಹಾಗೂ ಬೆನಚಗೆರೆ ಗೇಟ್, ಹಿಂಡಿಸ್ಕೆರೆ ಗೇಟ್, ಶಾರದಾ ನಗರ, ಬಿದರೆಗುಡಿ ಗೇಟ್, ನಂದಿಹಳ್ಳಿ ಗೇಟ್ ಸೇರಿ ಇತರೆ ರೋಡ್ ಓವರ್ ಬ್ರಿಡ್ಜ್ ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲೇ ಕೈಗೊಂಡು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕೆಂದು ನಿರ್ದೇಶಿಸಿದರು.
ಜಿಲ್ಲೆಯ ಹೊನ್ನವಳ್ಳಿ, ಬೆಣ್ಣೆಗೆರೆಯಲ್ಲಿ ಕೈಗೊಂಡಿರುವ ಲೆವೆಲ್ ಕ್ರಾಸಿಂಗ್ ಕಾಮಗಾರಿ ಶೇ.90ರಷ್ಟು ಪೂರ್ಣಗೊಂಡಿದೆ. ರೈಲ್ವೆ ಯೋಜನೆಗಳ ಕಾಮಗಾರಿಗಳನ್ನು ಮಳೆಯಿಂದ ತೊಂದರೆಯಾಗದಂತೆ ನಿರ್ಮಾಣ ಮಾಡಬೇಕು. ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಯೋಜನೆಗಳನ್ನು ಚುರುಕುಗೊಳಿಸಬೇಕು. ಯಾವುದೇ ಕಾಮಗಾರಿಗಳನ್ನು ಪ್ರಾರಂಭಿಸುವ ಮುನ್ನ ನನ್ನ ಗಮನಕ್ಕೆ ತರಬೇಕು ಎಂದರು.

ಶಿರಾ: ಫೆ.9, 10ರಂದು ವಿದ್ಯುತ್ ವ್ಯತ್ಯಯ
ತುಮಕೂರು ತಾಲೂಕಿನ ಹೆಗ್ಗೆರೆ ಲೆವೆಲ್ ಕ್ರಾಸಿಂಗ್ ನಿರ್ಮಾಣಕ್ಕೆ ಅಡ್ಡಿಯಾಗಿರುವ ಸಮಸ್ಯೆಯನ್ನು ಕೂಡಲೇ ಪರಿಹರಿಸಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಹೇಳಿದರ ಅವರು ತುಮಕೂರು-ರಾಯದುರ್ಗ, ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲಿಸಿದರು.
ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ಗ್ರಾಮಾಂತರ ಶಾಸಕ ಸುರೇಶ್ ಗೌಡ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಮಿತೇಶ ಕುಮಾರ್ ಸಿಂಹ, ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕ ಆಶುಟೋಷ್ ಮಾತುರ್, ಮುಖ್ಯ ಇಂಜಿನಿಯರ್(ನಿರ್ಮಾಣ) ಸರೋಜ್ ಕುಮಾರ್ ಬನ್‍ವಾಲ್, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರ್ ಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತೆ ಅಶ್ವಿಜ ಬಿ.ವಿ. ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಕ್ಯಾಲ್ಕುಲೇಟರ್’ನಂತೆ ನಿಮ್ಮ ಮಕ್ಕಳು ಗಣಿತದ ಲೆಕ್ಕಗಳನ್ನು ಬಿಡಿಸಲು ಕಲಿಯಬೇಕೆ? ಇಲ್ಲಿದೆ ಸುವರ್ಣಾವಕಾಶ!

About The Author

You May Also Like

More From Author

+ There are no comments

Add yours