ಹೃದಯಾಘಾತದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು
Tumkur news
ತುಮಕೂರು: 10ನೇ ತರಗತಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕನಾಯಕನಹಳ್ಳಿ ತಾಲೂಕು ಭೈರಾಪುರ ಗ್ರಾಮದ ರಾಹುಲ್ (16) ಮೃತ ಬಾಲಕ. ಭೈರಾಪುರ ಗ್ರಾಮದ ಜಯರಾಂ ಎಂಬುವರ ಪುತ್ರ ರಾಹುಲ್, ಚಿಕ್ಕನಾಯಕನಹಳ್ಳಿ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ. ಶುಕ್ರವಾರ ಶಾಲೆಗೆ ಹೋಗಿ ಮನೆಗೆ ವಾಪಸ್ ಬಂದಿದ್ದ ರಾಹುಲ್‌ಗೆ ರಾತ್ರಿ 9:30ರ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದೆ.
ಕೂಡಲೇ ರಾಹುಲ್‌ನನ್ನು ಪೋಷಕರು ಹುಳಿಯಾರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾಹುಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
+ There are no comments
Add yours