ಎತ್ತಿನಹೊಳೆ ನಿಧಾನಗತಿಯಲ್ಲಿ ಸಾಗಿದೆ: ಪರಮೇಶ್ವರ್ ಅಸಮಾಧಾನ
Tumkur news
ತುಮಕೂರು: ಎತ್ತಿನಹೊಳೆ ಯೋಜನೆ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ತುಮಕೂರು-ರಾಯದುರ್ಗ ಹಾಗೂ ತುಮಕೂರು-ದಾವಣಗೆರೆ ಮಾರ್ಗದ ರೈಲ್ವೆ ಯೋಜನೆ ಮತ್ತು ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ವಿವಿಧ ಹಂತವಾರು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಆಗುತ್ತಿರುವ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದರೊಂದಿಗೆ ಅವರು ಮಾತನಾಡಿದರು. ತುಮಕೂರು-ರಾಯದುರ್ಗ ಹಾಗೂ ತುಮಕೂರು-ದಾವಣಗೆರೆ ಮಾರ್ಗದ ರೈಲ್ವೆ ಯೋಜನೆ ಮತ್ತು ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯು ನಿಧಾನಗತಿಯಲ್ಲಿ ಸಾಗಿದೆ. ವಿವಿಧ ಹಂತವಾರು ಭೂಸ್ವಾಧೀನ ಪ್ರಕ್ರಿಯೆ ಆಗಿಲ್ಲವೆಂದು ಅಸಮಧಾನ ವ್ಯಕ್ತಪಡಿಸಿದರು.
ತುಮಕೂರು-ರಾಯದುರ್ಗ ರೈಲು ಯೋಜನೆ: 20 ಕೋಟಿ ರೂ. ಪರಿಹಾರ ಬಾಕಿ
ಭೂಸ್ವಾಧೀನಕ್ಕೆ ಎಲ್ಲೆಲ್ಲಿ ಸಮಸ್ಯೆಗಳಿವೆ? ಯಾವ ಕಾರಣದಿಂದ ನಿಂತಿವೆ ಎಂಬುದನ್ನು ಸಭೆಯಲ್ಲಿ ಪರಿಶೀಲಿಸಿ ಮಾಹಿತಿ ಪಡೆದಿದ್ದೇನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಹೇಮಾವತಿ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಕುಣಿಗಲ್ ಸೇರಿದಂತೆ ಜಿಲ್ಲೆಯ ನಾಲ್ಕು ಏತ ನೀರಾವರಿ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆಯಲ್ಲಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಿದ್ದೇನೆ. ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ 160 ಎಕರೆ ಭೂಸ್ವಾಧೀನ ಆಗಬೇಕಿದೆ. ಕೆಐಎಡಿಬಿ ಯೋಜನೆಯಡಿ 12 ಸಾವಿರ ಎಕರೆಗೂ ಹೆಚ್ಚು ಪ್ರದೇಶದಲ್ಲಿ ಇಂಡಸ್ಟ್ರೀಯಲ್ ಹಬ್ ನಿರ್ಮಾಣ ಮಾಡಲಾಗಿದ್ದು, ಇಂಡಸ್ಟ್ರಿಯಲ್ ಹಬ್‍ಗೆ ಸಂಬಂಧಿಸಿದಂತೆ 6 ಹಂತಗಳ ಪೈಕಿ 3 ಹಂತದ ಕಾಮಗಾರಿಗಳು ಪೂರ್ಣಗೊಂಡಿರುವ ಬಗ್ಗೆ ಸಭೆಯಲ್ಲಿ ಪ್ರಗತಿ ಪರಿಶೀಲಿಸಲಾಗಿದೆ ಎಂದು ತಿಳಿಸಿದರು.
ಈ ಬಾರಿ ಆಯ-ವ್ಯಯದಲ್ಲಿ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಯೋಜನೆಗಳನ್ನು ನೀಡುವಂತೆ ಕೇಳಿದ್ದೇನೆ. ಆಯವ್ಯಯದ ಬಗ್ಗೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದೇನೆ ಎಂದು ತಿಳಿಸಿದರು.
ತುಮಕೂರು: ನಿಗದಿತ ಸಮಯಕ್ಕೆ ಕಚೇರಿ ಕೆಲಸಕ್ಕೆ ಹಾಜರಾಗಿ: ಜಿಲ್ಲಾಧಿಕಾರಿ ಸೂಚನೆ
+ There are no comments
Add yours