ಬಿಸಿಲಿನ ಬೇಗೆ: ಮುಂಜಾಗ್ರತೆವಹಿಸಲು ಕಾರ್ಮಿಕರಲ್ಲಿ ಮನವಿ
Tumkur news
ತುಮಕೂರು: ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಬಿಸಿಲು ಹೆಚ್ಚಾಗಿದ್ದು, ಬಿಸಿಲಿನ ಪ್ರಕೋಪದಿಂದ ತಪ್ಪಿಸಿಕೊಳ್ಳಲು ಕಾರ್ಮಿಕರು ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಕಾರ್ಮಿಕ ಅಧಿಕಾರಿ ಕೆ.ತೇಜಾವತಿ ಮನವಿ ಮಾಡಿದ್ದಾರೆ.
ಕಾರ್ಮಿಕರು ದೇಹವನ್ನು ತಂಪಾಗಿಟ್ಟುಕೊಳ್ಳಬೇಕು, ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯುವುದು, ತಾಜಾ ಹಣ್ಣು ಸೇವನೆ ಮಾಡುವುದು ಆರೋಗ್ಯಕ್ಕೆ ಉತ್ತಮ. ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಕಾಮಗಾರಿಯನ್ನು ಸ್ಥಗಿತಗೊಳಿಸಿ ಈ ಅವಧಿಯಲ್ಲಿ ಕಾರ್ಮಿಕರು ಅಗತ್ಯ ವಿಶ್ರಾಂತಿ ತೆಗೆದುಕೊಳ್ಳಲು ಗುತ್ತಿಗೆದಾರರು, ಮಾಲೀಕರು ಅವಕಾಶ ಕಲ್ಪಿಸಿಕೊಡಬೇಕೆಂದು ತಿಳಿಸಿದ್ದಾರೆ.
ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಮತ್ತು ಕಾರ್ಮಿಕರು ಕಾಮಗಾರಿ ಪ್ರಕ್ರಿಯೆಯಲ್ಲಿ ತೊಡಗಿರುವ ಸಂದರ್ಭದಲ್ಲಿ ಟೋಪಿ ಧರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ತುಮಕೂರು: ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಇಲ್ಲಿದೆ ಮಾಹಿತಿ
+ There are no comments
Add yours